2023-2024ನೇ ಸಾಲಿನ ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘದ ದತ್ತಿನಿಧಿ ಪ್ರಶಸ್ತಿ ಪ್ರಕಟ

ಹೊಸದಿಗಂತ ಡಿಜಿಟಲ್ ಡೆಸ್ಕ್:

ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘವು ನೀಡುವ ವಾರ್ಷಿಕ ಕೆಯುಡಬ್ಲ್ಯೂಜೆ ಚಾರಿಟೇಬಲ್ ಫೌಂಡೇಶನ್ ಪ್ರಶಸ್ತಿಯನ್ನು ಪ್ರಕಟಿಸಲಾಗಿದೆ. ದತ್ತಿ ಪ್ರಶಸ್ತಿಗಳು ತಲಾ 5,000 ರೂ. ನಗದು ಬಹುಮಾನ, ಪ್ರಶಸ್ತಿ ಪಲಕ ಮತ್ತು ಪುರಸ್ಕಾರಗಳನ್ನು ಹೊಂದಿರುತ್ತದೆ. ಏಪ್ರಿಲ್ 1 ರಂದು ಚಿತ್ರದುರ್ಗದಲ್ಲಿ ನಡೆಯುವ ಕಾರ್ಯಕ್ರಮದಲ್ಲಿ ದತ್ತಿ ಪ್ರಶಸ್ತಿ ಪ್ರದಾನ ಮಾಡಲಾಗುವುದು.

ಪ್ರಶಸ್ತಿಗಳ ವಿವರ:

ಡಾ. ಬಾಬಾ ಸಾಹೇಬ ಅಂಬೇಡ್ಕರ್ ಪ್ರಶಸ್ತಿ: ಬಿ.ಎಂ.ಬಶೀರ್, ಮಂಗಳೂರು

ಗೊಮ್ಮಟ ಮಾಧ್ಯಮ ಪ್ರಶಸ್ತಿ: ಕುಂತಿನಾಥ ಶ್ರೀ ಕಲಮನಿ, ಬೆಳಗಾವಿ

ಡಿವಿಜಿ ಪ್ರಶಸ್ತಿ: ವಿ.ವೆಂಕಟೇಶ್, ಬೆಂಗಳೂರು

ಸಿ.ಆರ್.ಕೃಷ್ಣರಾವ್(ಸಿಆರ್‌ಕೆ) ಪ್ರಶಸ್ತಿ: ಸಿ.ಜಿ.ಮಂಜುಳ, ಬೆಂಗಳೂರು

ಯಶೋಧಮ್ಮ ಜಿ ನಾರಾಯಣ ಪ್ರಶಸ್ತಿ: ಮಲ್ಲಿಗೆ ಮಾಚಮ್ಮ, ಮೈಸೂರು

ಎಸ್.ವಿ.ಜಯಶೀಲರಾವ್ ಪ್ರಶಸ್ತಿ: ಮೋಹನ ಹೆಗಡೆ, ಹುಬ್ಬಳ್ಳಿ

ಡಾ.ಎಂ.ಎಂ.ಕಲಬುರ್ಗಿ ಪ್ರಶಸ್ತಿ: ಸನತ್ ಕುಮಾರ್ ಬೆಳಗಲಿ

ಕಿಡಿ ಶೇಷಪ್ಪ ಪ್ರಶಸ್ತಿ: ಬಿ.ಎಂ.ನಂದೀಶ್, ಹಾಸನ

ಎಚ್.ಎಸ್.ದೊರೆಸ್ವಾಮಿ ಪ್ರಶಸ್ತಿ: ಆರ್.ಜಯಕುಮಾರ್, ಬೆಂಗಳೂರು

ಪಿ.ಆರ್.ರಾಮಯ್ಯ ಪ್ರಶಸ್ತಿ: ಸಿ.ಕೆ.ಮಹೇಂದ್ರ, ಮೈಸೂರು

ಎಚ್.ಕೆ.ವೀರಣ್ಣಗೌಡ ಪ್ರಶಸ್ತಿ: ಅಶೋಕ್ ರಾಮ್, ರಾಮನಗರ

ರಾಜಶೇಖರಕೋಟಿ ಪ್ರಶಸ್ತಿ: ಶಶಿಕುಮಾರ್ ಬಿ ಕೆರೂರ, ಬಾಗಲಕೋಟೆ

ಪಿ.ರಾಮಯ್ಯ ಪ್ರಶಸ್ತಿ: ಮನೋಹರ ಮಲ್ಲಾಡದ, ರಾಣೆಬೆನ್ನೂರು

ಮ.ರಾಮಮೂರ್ತಿ ಪ್ರಶಸ್ತಿ: ಎಚ್.ಕೆ.ಬಸವರಾಜು, ಬೆಂಗಳೂರು

ಗರುಡನಗಿರಿ ನಾಗರಾಜ್ ಪ್ರಶಸ್ತಿ: ಪ್ರಭುಲಿಂಗ ಶಾಸ್ತ್ರಿಮಠ, ಬೆಂಗಳೂರು

ಮಹದೇವ ಪ್ರಕಾಶ್ ಪ್ರಶಸ್ತಿ: ವಿಜಯಕುಮಾರ್ ವಾರದ, ಕಲಬುರಗಿ

ಶಿವಮೊಗ್ಗದ ಮಿಂಚು ಶ್ರೀನಿವಾಸ್ ಪ್ರಶಸ್ತಿ: ಎನ್.ಬಾಬು, ಭದ್ರಾವತಿ

ಎಚ್.ಎಸ್.ರಂಗಸ್ವಾಮಿ ಪ್ರಶಸ್ತಿ: ನಾಮದೇವ ವಾಟ್ಕರ್, ಯಾದಗಿರಿ

ಎಂ.ನಾಗೇಂದ್ರರಾವ್ ಪ್ರಶಸ್ತಿ: ರವಿ ಆರ್, ದಾವಣಗೆರೆ

ಗಿರಿಜಮ್ಮ ರುದ್ರಪ್ಪ ತಾಳಿಕೋಟೆ ಪ್ರಶಸ್ತಿ: ಕೆ.ಗೋಪಿಕಾ ಮಲ್ಲೇಶ್, ಕೋಲಾರ

ಗುರುಲಿಂಗಸ್ವಾಮಿ ಹೊಳಿಮಠ ಪ್ರಶಸ್ತಿ: ಆರ್.ಸಿ.ಪುಟ್ಟರಾಜು, ಚಾಮರಾಜನಗರ

ವಿಶೇಷ ಪ್ರಶಸ್ತಿ:

ಚಿಕ್ಕಪ್ಪನಳ್ಳಿ ಷಣ್ಮುಖ, ಎಸ್.ಬಿ.ರವಿಕುಮಾರ್, ಶ.ಮಂಜುನಾಥ್, ರವಿ ಮಲ್ಲಾಪುರ ಸೇರಿ ಒಟ್ಟು ನಾಲ್ವರಿಗೆ ವಿಶೇಷ ಪ್ರಶಸ್ತಿ ಸಿಕ್ಕಿದೆ.

 

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!