ಹೊಸದಿಗಂತ ಡಿಜಿಟಲ್ ಡೆಸ್ಕ್:
ಲೋಕಸಭೆ ಚುನಾವಣೆ ಹಿನ್ನೆಲೆ ಕಾಂಗ್ರೆಸ್ ಕೊನೆಗೂ ಕೋಲಾರ ಟಿಕೆಟ್ ಘೋಷಣೆ ಮಾಡಿದೆ. ಕೋಲಾರದಿಂದ ಕೆ.ವಿ.ಗೌತಮ್ ಅವರನ್ನು ಚುನಾವಣಾ ಕಣಕ್ಕಿಳಿಸಲು ಕಾಂಗ್ರೆಸ್ ಹೈಕಮಾಂಡ್ ನಿರ್ಧರಿಸಿದೆ.
ರಾಜ್ಯದ 27 ಲೋಕಸಭಾ ಕ್ಷೇತ್ರಗಳಲ್ಲಿ ಅಭ್ಯರ್ಥಿಗಳನ್ನು ಘೋಷಿಸಿದ ಕಾಂಗ್ರೆಸ್ ಗೆ ತಲೆನೋವಾಗಿದ್ದ ಏಕೈಕ ಕ್ಷೇತ್ರ ಕೋಲಾರ. ಈ ಕ್ಷೇತ್ರದ ಟಿಕೆಟ್‌ಗಾಗಿ ಹಾಲಿ ಸಚಿವ ಕೆ.ಎಚ್.ಮುನಿಯಪ್ಪ ಹಾಗೂ ಮಾಜಿ ಸಚಿವ ರಮೇಶ್ ಕುಮಾರ್ ಸ್ಪರ್ಧಿಸಿದ್ದರು.
ಅಳಿಯನಿಗೆ ಟಿಕೆಟ್ ನೀಡುವಂತೆ ಮುನಿಯಪ್ಪ ತೀವ್ರ ಲಾಬಿ ನಡೆಸಿದ್ದರು. ಮುನಿಯಪ್ಪ ಅವರ ಒತ್ತಡಕ್ಕೆ ಮಣಿದು ರಮೇಶ್ ಕುಮಾರ್ ಬೆಂಬಲಿಗ ಶಾಸಕರು, ಸಚಿವರು ರಾಜೀನಾಮೆ ನೀಡಲು ಸಿದ್ಧರಾಗಿದ್ದರು. ಇದೀಗ ಕಾಂಗ್ರೆಸ್ ಹೈಕಮಾಂಡ್ ಎರಡೂ ಬಣಗಳನ್ನು ಪರಿಗಣಿಸದೆ ಮೂರನೇ ವ್ಯಕ್ತಿಗೆ ಟಿಕೆಟ್ ನೀಡಿದೆ.
ರಮೇಶ್ ಕುಮಾರ್ ಮತ್ತು ಮುನಿಯಪ್ಪ ಬಣಗಳ ಅಭಿಪ್ರಾಯವನ್ನು ಗಣನೆಗೆ ತೆಗೆದುಕೊಳ್ಳದೆ ಕಾಂಗ್ರೆಸ್ ಹೈಕಮಾಂಡ್ ಮೂರನೇ ಅಭ್ಯರ್ಥಿಯನ್ನು ಆಯ್ಕೆ ಮಾಡಿರುವ ಹೈಕಮಾಂಡ್ ನಿರ್ಧಾರದಿಂದ ಎರಡೂ ಬಣಗಳು ತೀವ್ರ ಅಸಮಾಧಾನ ವ್ಯಕ್ತಪಡಿಸಿದೆ.