ಹೊಸದಿಗಂತ ಡಿಜಿಟಲ್ ಡೆಸ್ಕ್:
ಮಾರ್ಚ್ 12 ರಿಂದ 14ರವರೆಗೆ ರಾಷ್ಟ್ರೀಯ ಸ್ವಯಂಸೇವಕ ಸಂಘದ ವಾರ್ಷಿಕ ಅಖಿಲ ಭಾರತೀಯ ಪ್ರತಿನಿಧಿ ಸಭಾ ಹರಿಯಾಣದ ಸಮಲ್ಕಾದಲ್ಲಿ ನಡೆಯಲಿದೆ .
ಈ ಕುರಿತು ಪತ್ರಿಕಾಗೋಷ್ಠಿ ನಡೆಸಿ ಮಾಹಿತಿ ಹಂಚಿಕೊಂಡ ರಾಷ್ಟ್ರೀಯ ಸ್ವಯಂಸೇವಕ ಸಂಘದ ಅಖಿಲ ಭಾರತ ಪ್ರಚಾರ ಪ್ರಮುಖರಾದಸುನಿಲ್ ಅಂಬೇಕರ್ ಅವರು , ರಾಷ್ಟ್ರೀಯ ಸ್ವಯಂಸೇವಕ ಸಂಘವು ಪ್ರತಿವರ್ಷವೂ ಅಖಿಲ ಭಾರತೀಯ ಪ್ರತಿನಿಧಿ ಸಭಾ ನಡೆಸಲಾಗುತ್ತದೆ. ಈ ವರ್ಷ ಪಾನಿಪತ್ ಜಿಲ್ಲೆಯ ಸಮಲ್ಕಾದಲ್ಲಿ ನಡೆಸುತ್ತಿದ್ದು ಮಾ . 12ರ ಬೆಳಿಗ್ಗೆಯಿಂದ ಪ್ರಾರಂಭವಾಗಿ ಮಾ. 14ರ ಸಂಜೆ ಮುಕ್ತಾಯಗೊಳ್ಳಲಿದೆ ಎಂದರು.
1400ಕ್ಕೂ ಹೆಚ್ಚು ಪ್ರತಿನಿಧಿಗಳು ಅಪೇಕ್ಷಿತರಿದ್ದು, ಸಂಘದ ಅಖಿಲ ಭಾರತೀಯ ಕಾರ್ಯಕಾರಿಣಿಯ ಎಲ್ಲ ಸದಸ್ಯರು ವಿಶೇಷವಾಗಿ ಸರಸಂಘಚಾಲಕರಾದ ಡಾ.ಮೋಹನ್ ಭಾಗವತ್,ಸರಕಾರ್ಯವಾಹ ದತ್ತಾತ್ರೇಯ ಹೊಸಬಾಳೆ, ಎಲ್ಲ ಸಹ ಸರಕಾರ್ಯವಾಹರು ಮತ್ತು ಸಂಘ ಪ್ರೇರಿತ ವಿವಿಧ ಸಂಘಟನೆಗಳ ಪ್ರಮುಖ ಪದಾಧಿಕಾರಿಗಳೂ ಸಹ ಅಪೇಕ್ಷಿತರು. ಎಲ್ಲಾ ಕ್ಷೇತ್ರ ಮತ್ತು ಪ್ರಾಂತಗಳ ಸಂಘಚಾಲಕರು ಮತ್ತು ಕಾರ್ಯವಾಹರು ಹಾಗು ಪದಾಧಿಕಾರಿಗಳು ಭಾಗವಹಿಸಲಿದ್ದಾರೆ ಎಂದರು.