ಕೋನಸೀಮೆಯಲ್ಲಿ 48 ಗಂಟೆಗಳ ಕಾಲ ಇಂಟರ್‌ನೆಟ್‌ ಸೇವೆ ಸ್ಥಗಿತ, 91ಮಂದಿ ಬಂಧನ

ಹೊಸದಿಗಂತ ಡಿಜಿಟಲ್‌ ಡೆಸ್ಕ್:‌ 

ಕೋನಸೀಮೆಯ 8 ವಲಯಗಳಲ್ಲಿ ಇನ್ನೂ 48 ಗಂಟೆಗಳ ಕಾಲ ಇಂಟರ್ನೆಟ್ ಸೇವೆಯನ್ನು ಸ್ಥಗಿತಗೊಳಿಸಲು ಅಧಿಕಾರಿಗಳು ನಿರ್ಧರಿಸಿದ್ದಾರೆ. ಅಮಲಾಪುರಂ, ಅಂಬಾಜಿಪೇಟ, ಐನವಿಲ್ಲಿ, ಉಪ್ಪಲಗುಪ್ತಂ, ಅಲ್ಲಾವರಂ, ಕೊತ್ತಪೇಟ, ರಾವುಲಪಾಲೆಂ ಮತ್ತು ಮುಮ್ಮಿಡಿವರಂ ವಲಯಗಳಲ್ಲಿ ಇಂಟರ್ನೆಟ್ ಸೇವೆಗಳನ್ನು ಕಡಿತಗೊಳಿಸಲಾಗಿದೆ.

ಮೇ. 24ರಂದು ಆಂಧ್ರದಲ್ಲಿ ಹೊಸದಾಗಿ ರಚಿಸಲಾದ ಕೋನಸೀಮಾ ಜಿಲ್ಲೆಯನ್ನು ಬಿ.ಆರ್.ಅಂಬೇಡ್ಕರ್ ಕೋನಸೀಮಾ ಜಿಲ್ಲೆ ಎಂದು ಮರುನಾಮಕರಣ ಮಾಡುವುದನ್ನು ವಿರೋಧಿಸಿ ಅಮಲಾಪುರಂನಲ್ಲಿ ಹಿಂಸಾಚಾರ ಭುಗಿಲೆದ್ದಿತು. ಅಂದಿನಿಂದ ಇಂಟರ್ನೆಟ್ ಸೇವೆಗಳನ್ನು ಸ್ಥಗಿತಗೊಳಿಸಲಾಗಿದೆ. ಗಲಭೆಗೆ ಸಂಬಂಧಿಸಿದಂತೆ ಇದುವರೆಗೆ ಪೊಲೀಸರು 91 ಜನರನ್ನು ಬಂಧಿಸಿದ್ದಾರೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!