ಮತ್ತೊಂದು ಅಪಘಾತ: ಮಂತ್ರಾಲಯ ಸಂಸ್ಕೃತ ವಿದ್ಯಾಪೀಠದ ವಾಹನ ಪಲ್ಟಿಯಾಗಿ ನಾಲ್ಕು ಸಾವು

ಹೊಸದಿಗಂತ ಡಿಜಿಟಲ್‌ ಡೆಸ್ಕ್‌:

ಮಂತ್ರಾಲಯದ ಸಂಸ್ಕೃತ ವಿದ್ಯಾಪೀಠದ ವಾಹನ ಪಲ್ಟಿಯಾಗಿ ನಾಲ್ವರು ದುರ್ಮರಣಕ್ಕೀಡಾಗಿರುವ ಘಟನೆ ರಾಯಚೂರಿನ ಸಿಂಧನೂರು ನಗರದ ಹೊರವಲಯದಲ್ಲಿ ತಡರಾತ್ರಿ ನಡೆದಿದೆ.

ಘಟನೆಯಲ್ಲಿ ಮೂವರು ವಿದ್ಯಾರ್ಥಿಗಳು (Students), ಓರ್ವ ಚಾಲಕ ಸಾವನ್ನಪ್ಪಿದ್ದಾರೆ. ವಿದ್ಯಾರ್ಥಿಗಳಾದ ಹಯವದನ (18), ಸುಜಯೇಂದ್ರ(22), ಅಭಿಲಾಷ (20) ಹಾಗೂ ಚಾಲಕ ಜಂಸಾಲಿ ಶಿವ (20) ಮೃತ ದುರ್ದೈವಿಗಳು.

14 ಮಂದಿ ಪ್ರಯಾಣಿಸುತ್ತಿದ್ದ ಕ್ರೂಸರ್‌ ವಾಹನವು ಮಂತ್ರಾಲಯದಿಂದ ಕೊಪ್ಪಳದ ಆನೆಗುಂದಿಯ ನರಹರಿ ತೀರ್ಥರ ವೃಂದಾವನಕ್ಕೆ ತೆರಳುತ್ತಿತ್ತು. ಈ ವೇಳೆ ಆಕ್ಸಿಲರೇಟರ್ ಕಟ್‌ ಆಗಿದ್ದರಿಂದ ವಾಹನ ಪಲ್ಟಿ ಹೊಡೆದಿದೆ. ಘಟನೆಗೆ ಚಾಲಕನ ಅತಿವೇಗ ಮತ್ತು ನಿರ್ಲಕ್ಷ್ಯವೇ ಕಾರಣ ಎಂದು ಮೇಲ್ನೋಟಕ್ಕೆ ಕಂಡುಬಂದಿದೆ. ಈ ಬಗ್ಗೆ ತನಿಖೆ ನಡೆಯುತ್ತಿದೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!