Wednesday, August 10, 2022

Latest Posts

ಬೆಂಗಳೂರಿನಲ್ಲಿ ಮತ್ತೊಂದು ಅಪಘಾತ: ಸ್ಥಳದಲ್ಲೇ ಮೂವರ ಸಾವು

ಹೊಸದಿಗಂತ ಆನ್‌ಲೈನ್ ಡೆಸ್ಕ್:

ರಾಜ್ಯ ರಾಜಧಾನಿಯಲ್ಲಿ ಅಪಘಾತ ಪ್ರಕರಣಗಳು ಹೆಚ್ಚುತ್ತಿದ್ದು, ಇಂದು ಬೆಳಗಿನ ಜಾವ ಮತ್ತೊಂದು ಭೀಕರ ಅಪಘಾತ ಸಂಭವಿಸಿದೆ.
ಆಂಬುಲೆನ್ಸ್ ಹಾಗೂ ಲಾರಿ ನಡುವೆ ಅಪಘಾತ ಸಂಭವಿಸಿದ್ದು, ಮೂರು ಮಂದಿ ಸ್ಥಳದಲ್ಲೇ ಮೃತಪಟ್ಟಿದ್ದಾರೆ.
ಆಂಬುಲೆನ್ಸ್‌ನಲ್ಲಿದ್ದ ಮೂವರು ಮೃತಪಟ್ಟಿದ್ದು, ಇನ್ನಿಬ್ಬರಿಗೆ ಗಂಭೀರವಾದ ಗಾಯಗಳಾಗಿವೆ. ಬೆಳಗಿನ ಜಾವ 5 ಗಂಟೆಗೆ ಅಪಘಾತ ಸಂಭವಿಸಿದ್ದು, ಆಂಬುಲೆನ್ಸ್ ಚಾಲಕ ನಿದ್ದೆಮಂಪರಿನಲ್ಲಿದ್ದ ಕಾರಣ ಅಪಘಾತ ಸಂಭವಿಸಿದೆ ಎನ್ನಲಾಗಿದೆ. ಹೆಚ್ಚಿನ ಮಾಹಿತಿ ನಿರೀಕ್ಷಿಸಲಾಗಿದೆ.

ಈ ಸುದ್ದಿ ಇತರರೊಂದಿಗೂ ಹಂಚಿಕೊಳ್ಳಿ

Whatsapp Group
Telegram

Latest Posts

Don't Miss