ವರಾಹ ರೂಪಂ’ ಹಾಡಿನ ಬಳಕೆಗೆ ಮತ್ತೆ ತಡೆ: ಜಿಲ್ಲಾ ಕೋರ್ಟ್‌ ಆದೇಶಕ್ಕೆ ಕೇರಳ ಹೈಕೋರ್ಟ್‌ ಬ್ರೇಕ್!

ಹೊಸದಿಗಂತ ಡಿಜಿಟಲ್‌ ಡೆಸ್ಕ್‌:

`ಕಾಂತಾರ’ಗೆ ಸಿನಿಮಾ ಯಶಸ್ಸು ಕಂಡರೂ ಒಂದಲ್ಲ ಒಂದು ಸಂಕಷ್ಟ ಎದುರಾಗುತ್ತಿದ್ದು, ಸಿನಿಮಾದ ‘ವರಾಹ ರೂಪಂ’ ಹಾಡಿನ ವಿರುದ್ಧ ಕೃತಿಚೌರ್ಯದ ಆರೋಪ ಮಾಡಿದ್ದ ಥೈಕ್ಕುಡಂ ಬ್ರಿಡ್ಜ್ ಅರ್ಜಿಯನ್ನು ವಜಾಗೊಳಿಸಿದ್ದ ಕೇರಳದ ಕೋಝಿಕ್ಕೋಡ್ ಜಿಲ್ಲಾ ನ್ಯಾಯಾಲಯದ ಆದೇಶಕ್ಕೆ ಇದೀಗ ಹೈಕೋರ್ಟ್ ತಡೆ ನೀಡಿದೆ.

ಸೆಪ್ಟೆಂಬರ್ 30 ಬಿಡುಗಡೆಯಾದ ರಿಷಬ್ ಶೆಟ್ಟಿ ಅವರ ಕಾಂತಾರ ಸಿನಿಮಾ ಅತ್ಯಂತ ಯಶಸ್ಸು ಕಂಡಿತ್ತು. ಇಡೀ ವಿಶ್ವದಲ್ಲೇ ಅಭಿಮಾನಿಗಳು ಸಿನಿಮಾವನ್ನು ಸ್ವೀಕರಿಸಿದರು. ಇದರ ನಡುವೆ ಸಿನಿಮಾದ ಹಾಡು ವಿರುದ್ಧ ಥೈಕ್ಕುಡಂ ಬ್ರಿಡ್ಜ್ ಕೇರಳದ ಸ್ಥಳೀಯ ನ್ಯಾಯಾಲಯಕ್ಕೆ ಅರ್ಜಿ ಸಲ್ಲಿಸಿದ್ದರು. ಇದರ ವಿಚಾರಣೆ ನಡೆಸಿದ ಕೋರ್ಟ್ ಚಿತ್ರದಲ್ಲಿ ಹಾಡು ಬಳಕೆಗೆ ಅನುಮತಿ ನೀಡಿತ್ತು. ಆದರೆ ಇದೀಗ ಕೇರಳ ಹೈಕೋರ್ಟ್ ಹೊಂಬಾಳೆ ಬ್ಯಾನರ್, ರಿಷಬ್ ಶೆಟ್ಟಿ, ಪೃಥ್ವಿರಾಜ್ ಫಿಲ್ಮ್ಸ್, ಅಮೆಜಾನ್ ಸೆಲ್ಲರ್ ಸರ್ವೀಸ್ ಪ್ರೈವೇಟ್‌ ಲಿಮಿಟೆಡ್, ಗೂಗಲ್ ಇಂಡಿಯಾ ಹೆಡ್ ಆಫೀಸ್, ಪೃಥ್ವಿರಾಜ್ ಸುಕುಮಾರನ್ ಸೇರಿದಂತೆ ಇತರರಿಗೆ ನೋಟಿಸ್ ಜಾರಿ ಮಾಡಿದೆ.

ರಿಷಬ್ ಶೆಟ್ಟಿ ನಟಿಸಿ, ನಿರ್ದೇಶಿರುವ `ಕಾಂತಾರ’ ಚಿತ್ರದ `ವರಾಹ ರೂಪಂ’ ಹಾಡಿಗೆ ಕೃತಿಚೌರ್ಯದ ಆರೋಪ ಮಾಡಲಾಗಿತ್ತು. ಹೊಂಬಾಳೆ ಸಂಸ್ಥೆ ವಿರುದ್ಧ ವರಾಹ ರೂಪಂ ಹಾಡು ಬಳಸಿದಕ್ಕಾಗಿ ಥೈಕ್ಕುಡಂ ಬ್ರಿಡ್ಜ್ ಸಲ್ಲಿಸಿದ್ದ ಅರ್ಜಿಯನ್ನು ಕೋಝಿಕ್ಕೋಡ್ ಜಿಲ್ಲಾ ನ್ಯಾಯಾಲಯ ವಜಾ ಮಾಡಿ ಆದೇಶಿಸಿತ್ತು. ಈ ಆದೇಶಕ್ಕೆ ಕೇರಳ ಹೈಕೋರ್ಟ್ ಗುರುವಾರ (ಡಿ.2) ತಡೆಯಾಜ್ಞೆ ನೀಡಿದೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!