ಹೊಸ ದಿಗಂತ ವರದಿ, ವಿಜಯಪುರ:
ಜಿಲ್ಲೆಯ ಭೀಮಾತೀರದ ಚಡಚಣ ಪಟ್ಟಣದ ಎಸ್ ಬಿಐ ಬ್ಯಾಂಕ್ ನಲ್ಲಿ ಸಿನಿಮೀಯ ರೀತಿಯಲ್ಲಿ ಕಳ್ಳರು ಪಿಸ್ತೂಲ್ ತೋರಿಸಿ, ಸಿಬ್ಬಂದಿಗೆ ಕಟ್ಟಿಹಾಕಿ, ದರೋಡೆ ಮಾಡಿರುವ ಘಟನೆ ಮಂಗಳವಾರ ಸಂಜೆ ನಡೆದಿದೆ.
ಇಲ್ಲಿನ ಬ್ಯಾಂಕ್ ನ ವ್ಯವಹಾರದ ಸಮಯ ಮುಗಿದ ಮೇಲೆ, 3 ಜನ ಮುಸುಕುಧಾರಿ ಖದೀಮರು, ಏಕಾಏಕಿ ಬ್ಯಾಂಕಿಗೆ ನುಗ್ಗಿ, ಪಿಸ್ತೂಲ್ ತೋರಿಸಿ ಸಿಬ್ಬಂದಿಯನ್ನು ಹೆದರಿಸಿ, ಕೈಕಾಲು ಕಟ್ಟಿ ಹಾಕಿ ಕಳ್ಳತನ ಮಾಡಿ, ಪರಾರಿಯಾಗಿದ್ದಾರೆ.
ಸುದ್ದಿ ತಿಳಿದು ಪೊಲೀಸರು ಸ್ಥಳಕ್ಕೆ ಆಗಮಿಸಿ, ಪರಿಶೀಲಿಸಿದ್ದಾರೆ. ಬ್ಯಾಂಕ್ ನಲ್ಲಿ ಎಷ್ಟು ಹಣ ಕಳ್ಳತನವಾಗಿದೆ ಎನ್ನುವ ಕುರಿತು ತಿಳಿದು ಬಂದಿಲ್ಲ. ಈ ಬಗ್ಗೆ ಪೊಲೀಸರು ತನಿಖೆ ಕೈಗೊಂಡಿದ್ದಾರೆ.
ಚಡಚಣ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.
ಜಿಲ್ಲೆಯ ಮನಗೂಳಿ ಕೆನರಾ ಬ್ಯಾಂಕ್ ನಲ್ಲಿ ಬಹುಕೋಟಿ ಮೌಲ್ಯದ ಚಿನ್ನಾಭರಣ ಕಳ್ಳನತ ಪ್ರಕರಣ ರಾಜ್ಯದಲ್ಲಿ ಸದ್ದು ಮಾಡಿತ್ತು, ಈ ಪ್ರಕರಣ ಮಾಸುವ ಮುನ್ನವೇ ಜಿಲ್ಲೆಯಲ್ಲಿ ಮತ್ತೊಂದು ಬ್ಯಾಂಕ್ ದರೋಡೆ ಪ್ರಕರಣ ನಡೆದಿರುವುದು ದುರಂತ.