ಹೊಸದಿಗಂತ ಡಿಜಿಟಲ್ ಡೆಸ್ಕ್:
ಬೆಳಗಾವಿಯ ಬಿಮ್ಸ್ ಆಸ್ಪತ್ರೆಯಲ್ಲಿ ಮತ್ತೋರ್ವ ಬಾಣಂತಿ ಸಾವನ್ನಪ್ಪಿದ್ದಾರೆ. ಬೆಳಗಾವಿ ತಾಲೂಕಿನ ಕರಡಿಗುದ್ದಿ ಗ್ರಾಮದ ಗಂಗವ್ವ ಗೊಡಕುಂದ್ರಿ (31) ಮೃತ ದುರ್ದೈವಿ.
ಜನವರಿ 28 ರಂದು ಬಿಮ್ಸ್ ಆಸ್ಪತ್ರೆಗೆ ದಾಖಲಾಗಿದ್ದರು. ಜನವರಿ 30ರ ರಾತ್ರಿ ಗಂಗವ್ವ ಅವರಿಗೆ ಹೆರಿಗೆ ಆಗಿತ್ತು.ಬಿಪಿ ಲೋ ಆಗಿ ಸೀರಿಯಸ್ ಇದೆ ಎಂದು ವೈದ್ಯರು ಜ.31ರಂದು ಕುಟುಂಬಸ್ಥರಿಗೆ ತಿಳಿಸಿದ್ದರು. ಇದಾದ ಸ್ಪಲ್ಪ ಹೊತ್ತಿಗೆ ಬಾಣಂತಿ ಮೃತಪಟ್ಟಿದ್ದಾರೆ.
ಬಿಮ್ಸ್ ವೈದ್ಯರ ನಿರ್ಲಕ್ಷ್ಯದಿಂದಲೇ ಸಾವಾಗಿದೆ ಎಂದು ಕುಟುಂಬಸ್ಥರು ಆರೋಪ ಮಾಡಿದ್ದಾರೆ. ಬೆಳಗಾವಿಯ ಎಪಿಎಂಸಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ನಡೆದಿದೆ.