ಹೊಸದಿಗಂತ ಡಿಜಿಟಲ್ ಡೆಸ್ಕ್:
ಶಾಸಕ ಮುನಿರತ್ನಗೆ ಮತ್ತೊಂದು ಸಂಕಷ್ಟ, ಆರ್ ಆರ್ ನಗರದ ಕ್ಷೇತ್ರದ ಕಾಮಗಾರಿಗಳ ತನಿಖೆಗೆ ಆದೇಶ ಹೊರಡಿಸಲಾಗಿದೆ. ಕಾಮಗಾರಿಗಳಲ್ಲಿ ಅವ್ಯವಹಾರ ನಡೆದಿದೆ ಎಂಬ ಆರೋಪ ಕೇಳಿಬಂದ ಹಿನ್ನೆಲೆ ಬಿಬಿಎಂಪಿ ಆಯುಕ್ತ ತುಷಾರ್ ಗಿರಿನಾಥ್ ಆದೇಶ ಹೊರಡಿಸಿದ್ದಾರೆ.
ಬಿಬಿಎಂಪಿ ಹಣಕಾಸು ಮುಖ್ಯಸ್ಥ ಮೌನೀಷ್ ಮದ್ದಿಲ್ ನೇತೃತ್ವದ ಸಮಿತಿ ತನಿಖೆಗೆ ಆದೇಶಿಸಿದೆ.
ಅತ್ಯಾಚಾರ ಆರೋಪಕ್ಕೆ ಸಂಬಂಧಿಸಿದಂತೆ ಜೈಲಿನಲ್ಲಿರುವ ಮುನಿರತ್ನ ಅವರನ್ನು ಎಸ್‌ಐಟಿ ಅಧಿಕಾರಿಗಳು ಬಂಧಿಸಿದ್ದು, ಮುನಿರತ್ನ ಅವರನ್ನು ಅಕ್ಟೋಬರ್ 5ರವರೆಗೆ ಎಸ್‌ಐಟಿ ಕಸ್ಟಡಿಯಲ್ಲಿ ಇರಿಸುವಂತೆ ನ್ಯಾಯಾಲಯ ಆದೇಶಿಸಿದೆ.