ಮತ್ತೊಬ್ಬ ಬಿಗ್‌ಬಾಸ್‌ ಸ್ಪರ್ಧಿಗೆ ಕಂಟಕ : ಡೈಲಾಗ್‌ ಹೇಳೋ ವೇಳೆ ತಾಯಿ ಚಾಮುಂಡೇಶ್ವರಿಗೆ ಅಪಮಾನ

ಹೊಸದಿಗಂತ ಡಿಜಿಟಲ್‌ ಡೆಸ್ಕ್‌: 

ಧಾರ್ಮಿಕ ಭಾವನೆಗೆ ಬಿಗ್‌ಬಾಸ್‌ ಸ್ಪರ್ಧಿ ರಕ್ಷಕ್ ಬುಲೆಟ್ ಧಕ್ಕೆಯುಂಟು ಮಾಡಿದ್ದಾರೆ ಎಂದು ಹಿಂದೂ ಸಂಘಟನೆಗಳು ದೂರು ದಾಖಲಿಸಲು ಮುಂದಾಗಿವೆ.

ರಿಯಾಲಿಟಿ ಶೋನಲ್ಲಿ ರಕ್ಷಕ್ ಅವರು ತಮ್ಮ ಡೈಲಾಗ್‌ ಮೂಲಕ ತಾಯಿ ಚಾಮುಂಡೇಶ್ವರಿಗೆ ಅಪಮಾನ ಮಾಡಿದ್ದಾರೆ ಎಂಬ ಆರೋಪ ಎದುರಿಸುತ್ತಿದ್ದಾರೆ.

ಕನ್ನಡದ ಹಿರಿಯ ನಟ ಬುಲೆಟ್ ಪ್ರಕಾಶ್ ಪುತ್ರ ರಕ್ಷಕ್ ಬುಲೆಟ್ ರಿಯಾಲಿಟಿ ಶೋವೊಂದರ ಸ್ಕಿಟ್‌ವೊಂದರಲ್ಲಿ ತಾಯಿ ಚಾಮುಂಡೇಶ್ವರಿ ವಿಚಾರ ಸಂಬಂಧ ಹೇಳಿದ್ದ ಡೈಲಾಗ್ ಒಂದು ವಿವಾದಕ್ಕೆ ಕಾರಣವಾಗಿದೆ. ಇದು ಸೋಷಿಯಲ್ ಮಿಡಿಯಾದಲ್ಲೂ ವಿಡಿಯೋ ಸಖತ್ ವೈರಲ್ ಆಗುತ್ತಿದ್ದು, ಇದು ಹಿಂದೂ ಪರ ಹೋರಾಟಗಾರರ ಆಕ್ರೋಶಕ್ಕೆ ಕಾರಣವಾಗಿದೆ.

ಶೋನಲ್ಲಿ ಸ್ಟೇಜ್ ಮೇಲೆ ರಕ್ಷಕ್ ಬುಲೆಟ್ ಅವರು ಸಹನಟಿಗೆ ನಿಮ್ಮನ್ನು ನೋಡ್ತಿದ್ರೆ ತಾಯಿ ಚಾಮುಂಡೇಶ್ವರಿ ಬೆಟ್ಟದಿಂದ ಇಳಿದು ಬಂದು ಸೀರೆ ಒಡವೆ ಬಿಚ್ಚಿಟ್ಟು, ಪ್ಯಾಂಟು ಶರ್ಟು ಹಾಕೊಂಡು ಸ್ವಿಜರ್‌ಲ್ಯಾಂಡ್‌ನಲ್ಲಿ ಟ್ರಿಪ್ ಹೊಡಿತಿದ್ದಾರೆ ಅನ್ನಿಸ್ತಿದೆ ಎಂದು ಡೈಲಾಗ್ ಹೊಡೆದಿದ್ದಾರೆ. ಸಹನಟಿಗೆ ಡೈಲಾಗ್‌ ಮೂಲಕ ಹೊಗಳುವ ಭರದಲ್ಲಿ ರಕ್ಷಕ್‌ ಯಡವಟ್ಟು ಮಾಡಿಕೊಂಡಿದ್ದಾರೆ. ಇದು ಹಿಂದೂ ಹೋರಾಟಗಾರರ ಕೋಪಕ್ಕೆ ಕಾರಣವಾಗಿದೆ.

- Advertisement - Ply
Nova

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!