ಹೊಸದಿಗಂತ ಡಿಜಿಟಲ್ ಡೆಸ್ಕ್:
ಭಾರತ-ಬಾಂಗ್ಲಾದೇಶ ನಡುವಿನ ಭಿನ್ನಾಭಿಪ್ರಾಯ ಹೆಚ್ಚುತ್ತಿದ್ದು, ಈಗಾಗಲೇ ಬಾಂಗ್ಲಾದೇಶದಲ್ಲಿ ಐಪಿಎಲ್ (IPL) ಪ್ರದರ್ಶನವನ್ನು ನಿಷೇಧಿಸಿದ್ದು, ಇದೀಗ ಅಲ್ಲಿನ ಬ್ಯಾಟ್ಸ್‌ಮನ್‌ಗಳು ಇನ್ನು ಮುಂದೆ ಭಾರತದ ಪ್ರಮುಖ ಬ್ಯಾಟ್ ತಯಾರಿಕಾ ಕಂಪನಿಯಾದ ಎಸ್‌ಜಿ ತಯಾರಿಸಿದ ಬ್ಯಾಟ್‌ಗಳನ್ನು ಬಳಸದಂತೆ ನಿಷೇಧ ಹೇರಲಾಗಿದೆ.
ವರದಿಗಳ ಪ್ರಕಾರ, ಇತ್ತೀಚಿನ ಬೆಳವಣಿಗೆಗಳ ಹಿನ್ನೆಲೆಯಲ್ಲಿ ಬಾಂಗ್ಲಾದೇಶ ಕ್ರಿಕೆಟಿಗರೊಂದಿಗಿನ ಒಪ್ಪಂದವನ್ನು ಎಸ್‌ಜಿ ಕೊನೆಗೊಳಿಸಲು ನಿರ್ಧರಿಸಿದೆ.
ಬಾಂಗ್ಲಾದೇಶದ ಅನೇಕ ಬ್ಯಾಟ್ಸ್‌ಮನ್‌ಗಳು ಎಸ್‌ಜಿ ಬ್ಯಾಟ್‌ಗಳನ್ನು ಬಳಸುತ್ತಾರೆ. ಅದರಲ್ಲಿ ಪ್ರಮುಖರು ಬಾಂಗ್ಲಾದೇಶ ಟಿ20 ವಿಶ್ವಕಪ್ ತಂಡದ ನಾಯಕ ಲಿಟ್ಟನ್ ದಾಸ್.
ವರದಿಗಳ ಪ್ರಕಾರ, ಎಸ್‌ಜಿ ಬಾಂಗ್ಲಾದೇಶ ಆಟಗಾರರೊಂದಿಗಿನ ಎಲ್ಲಾ ಕಿಟ್ ಪ್ರಾಯೋಜಕತ್ವ ಒಪ್ಪಂದಗಳನ್ನು ರದ್ದುಗೊಳಿಸಿದೆ. ಭಾರತೀಯ ಕಂಪನಿಯು ಬಾಂಗ್ಲಾದೇಶದ ಆಟಗಾರರೊಂದಿಗಿನ ತನ್ನ ಒಪ್ಪಂದವನ್ನು ವಿಸ್ತರಿಸಲು ಯಾವುದೇ ಆಸಕ್ತಿಯನ್ನು ತೋರಿಸಿಲ್ಲ ಎಂದು ವರದಿಯಾಗಿದೆ.
ಬೇಡಿಕೆ ತಿರಸ್ಕರಿಸಿದ ಐಸಿಸಿ
ಬಾಂಗ್ಲಾದೇಶದ ಟಿ20 ವಿಶ್ವಕಪ್ ಪಂದ್ಯಗಳನ್ನು ಭಾರತದಿಂದ ಶ್ರೀಲಂಕಾಕ್ಕೆ ಸ್ಥಳಾಂತರಿಸುವ ಸಾಧ್ಯತೆಯನ್ನು ಐಸಿಸಿ ಸ್ಪಷ್ಟವಾಗಿ ನಿರಾಕರಿಸಿದೆ. ವರದಿಗಳ ಪ್ರಕಾರ, ಬಾಂಗ್ಲಾದೇಶ ತಂಡವು ತಮ್ಮ ಪಂದ್ಯಗಳನ್ನು ಈಗ ಪ್ರಕಟವಾಗಿರುವ ವೇಳಾಪಟ್ಟಿಯ ಪ್ರಕಾರವೇ ಆಡಬೇಕೆಂದು ಐಸಿಸಿ ಸ್ಪಷ್ಟವಾಗಿ ಹೇಳಿದೆ. ಇದರರ್ಥ ಬಾಂಗ್ಲಾದೇಶವು ತಮ್ಮ ಟಿ20 ವಿಶ್ವಕಪ್ 2026 ರ ಗುಂಪು ಪಂದ್ಯಗಳನ್ನು ಭಾರತದಲ್ಲಿ ಆಡಬೇಕಾಗುತ್ತದೆ.

