August 19, 2026
Wednesday, August 19, 2026
spot_img

ಬರದ ಜೊತೆ ರಾಜ್ಯಕ್ಕೆ ಮತ್ತೊಂದು ಬರೆ! ತಮಿಳುನಾಡಿಗೆ ಪ್ರತಿದಿನ 3,500 ಕ್ಯೂಸೆಕ್ ನೀರು ಬಿಡಲು ಆದೇಶ

ಹೊಸದಿಗಂತ ಡಿಜಿಟಲ್‌ ಡೆಸ್ಕ್‌:

ರಾಜ್ಯದಲ್ಲಿ ಮಳೆಗಾಲವೇ ಅರ್ಧದಷ್ಟು ಮುಗಿದುಹೋದರೂ ಜನ ಹನಿಯನ್ನೂ ನೋಡಿಲ್ಲ. ಭೀಕರ ಬರದ ಭೀತಿ ಆವರಿಸಿದೆ. ಈ ಸಮಯದಲ್ಲಿ ಗಾಯದ ಮೇಲೆ ಬರೆಯಂತೆ ಕಾವೇರಿ ನೀರನ್ನು ತಮಿಳುನಾಡಿಗೆ ಬಿಡುವ ವಿಚಾರವಾಗಿ ಕಾವೇರಿ ನೀರು ನಿರ್ವಹಣಾ ಮಂಡಳಿ ಮಹತ್ವದ ಸೂಚನೆ ನೀಡಿದೆ.

ನೀರು ಹಂಚಿಕೆ ವಿಚಾರವಾಗಿ ಸಾಧಕ ಬಾಧಕಗಳ ಚರ್ಚೆ ನಡೆದ ಬಳಿಕ ತಮಿಳುನಾಡಿಗೆ ನೀರು ಬಿಡಲು CWRC ಸೂಚನೆ ನೀಡಿದೆ ಎಂದು ಜಲಸಂಪನ್ಮೂಲ ಸಚಿವ ರಾಮಲಿಂಗಾರೆಡ್ಡಿ ತಿಳಿಸಿದ್ದಾರೆ. ತಮಿಳುನಾಡಿಗೆ ನೀರು ಬಿಡಲು CWRC ಮಹತ್ವದ ಸೂಚನೆ ನೀಡಿದ್ದು, ಮುಂದಿನ 15 ದಿನಗಳ ಕಾಲ ತಮಿಳುನಾಡಿಗೆ 3500 ಕ್ಯೂಸೆಕ್ ನೀರು ಹರಿಸಲು ಆದೇಶ ನೀಡಿದ್ದು, ಈ ಬಗ್ಗೆ ಜಲಸಂಪನ್ಮೂಲ ಸಚಿವ ರಾಮಲಿಂಗಾರೆಡ್ಡಿ ಅವರು ತಿಳಿಸಿದ್ದಾರೆ.

ತಮಿಳುನಾಡಿನ ಒತ್ತಡದ ಮೇರೆಗೆ ಕಾವೇರಿ ನೀರು ನಿರ್ವಹಣಾ ಪ್ರಾಧಿಕಾರದ ಉನ್ನತ ಮಟ್ಟದ ಸಭೆಯನ್ನು ಜುಲೈ 22ರಂದು ದೆಹಲಿಯಲ್ಲಿ ಕರೆಯಲಾಗಿತ್ತು. ಕಳೆದ ಸಭೆಯಲ್ಲೂ ಕಾವೇರಿ ನದಿಯಿಂದ ತಮಿಳುನಾಡಿಗೆ ನೀರು ಬಿಡುವ ಬಗ್ಗೆ ಯಾವುದೇ ಸೂಚನೆ ನೀಡಿರಲಿಲ್ಲ.ಪ್ರತಿ ದಿನ 3,500 ಕ್ಯೂಸೆಕ್‌ನಂತೆ 15 ದಿನಗಳ ಕಾಲ ಒಟ್ಟು 4 ಟಿಎಂಸಿ ಗಳಷ್ಟು ನೀರು ಹರಿಸಲು ಸಿಡಬ್ಲ್ಯೂಆರ್‌ಸಿ ಹೇಳಿದೆ. ಆದ್ರೆ ಇದಕ್ಕೆ ಕರ್ನಾಟಕ ಸರ್ಕಾರ ಆಕ್ಷೇಪ ವ್ಯಕ್ತಪಡಿಸಿದೆ.

ರಾಜ್ಯದಲ್ಲಿ ಈಗಾಗಲೇ ಕುಡಿಯುವ ನೀರಿನ ಸಮಸ್ಯೆ ಎದುರಾಗಿದೆ. ಈ ಸಂದರ್ಭದಲ್ಲಿ ನೀರನ್ನು ಬಿಡುವುದು ಕಷ್ಟದ ಸಂಗತಿಯಾಗಿದೆ. ಮಗೆ ಮಳೆ ಇಲ್ಲ, ವರ್ಷ ಪೂರ್ತಿ ಕುಡಿಯುವ ನೀರು ಬೇಕು. ಕಾವೇರಿ ನೀರು ನಿರ್ವಹಣಾ ಪ್ರಾಧಿಕಾರದ ಮೊರೆ ಹೋಗುವ ಬಗ್ಗೆ ಚರ್ಚಿಸಿ ನಿರ್ಧಾರ ಮಾಡುತ್ತೇವೆ ಎಂದು ರಾಮಲಿಂಗಾ ರೆಡ್ಡಿ ತಿಳಿಸಿದ್ದಾರೆ.

Must Read

error: Copy ಬೇಡ, Coffee ಜೊತೆ ಹಂಚಿಕೊಳ್ಳಿ !