ಬೆಂಗಳೂರಿನಲ್ಲಿ ಮತ್ತೊಂದು ಬಿಎಂಟಿಸಿ ಬಸ್​ಗೆ​ ಬೆಂಕಿ

ಹೊಸದಿಗಂತ ಡಿಜಿಟಲ್‌ ಡೆಸ್ಕ್‌

ಬೆಂಗಳೂರಿನಲ್ಲಿ ಮಗದೊಂದು ಬಿಎಂಟಿಸಿ ಬಸ್‌ನಲ್ಲಿ ಬೆಂಕಿ ಕಾಣಿಸಿಕೊಂದ್ದಿದು, ಸ್ಥಳಕ್ಕಾಗಮಿಸಿದ ಅಗ್ನಿಶಾಮಕ ಸಿಬ್ಬಂದಿ ಬೆಂಕಿ ನಂದಿಸುವಲ್ಲಿ ಯಶಸ್ವಿಯಾಗಿದ್ದಾರೆ.
ಶೇಷಾದ್ರಿ ರಸ್ತೆಯಲ್ಲಿ ಸಂಚರಿಸುತ್ತಿದ್ದ ನಗರ ಸಾರಿಗೆ ಬಸ್‌ನಲ್ಲಿ ಏಕಾಏಕಿ ಬೆಂಕಿ ಕಾಣಿಸಿಕೊಂಡಿದೆ.
ಇತ್ತೀಚಿಗೆ ಸೌತ್ ಎಂಡ್ ಸರ್ಕಲ್ ಮತ್ತು ಮಕ್ಕಳ ಕೂಟದ ಬಳಿ ಎರಡು ಮಿನಿ ಬಸ್​ಗಳಲ್ಲಿ ಬೆಂಕಿ ಕಾಣಿಸಿಕೊಂಡಿತ್ತು. ನಂತರ ಬಿಎಂಟಿಸಿ ಅಧಿಕಾರಿಗಳು ಅಶೋಕ್ ಲೇಲ್ಯಾಂಡ್ ಕಂಪನಿಗೆ ದೂರು ನೀಡಿದ್ದರು. ಎಂಜಿನಿಯರ್‌ಗಳು ಬಂದು ಎಲ್ಲ ಬಸ್‌ಗಳನ್ನು ತಪಾಸಣೆ ಮಾಡಿ ಸಮಸ್ಯೆ ಬಗಹರಿಸಿದ್ದರು. ಬಳಿಕವೇ ಬಸ್‌ಗಳನ್ನು ಮತ್ತೆ ರೋಡ್‌ಗೆ ಇಳಿಸಲಾಗಿತ್ತು. ಇದೀಗ ಮತ್ತೊಂದು ಬಸ್​ನಲ್ಲಿ ಬೆಂಕಿ ಕಾಣಿಸಿಕೊಂಡಿರುವುದು ಸಾರ್ವಜನಿಕ ವಲಯದಲ್ಲಿ ಆತಂಕದ ಮನೆ ಮಾಡಿದೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!