ಪ್ರಯಾಣಿಕರಿಗೆ ಮತ್ತೊಂದು ಹೊರೆ, ಮೆಟ್ರೋ ಪ್ರಯಾಣ ದರ ಶೇ.43ರಷ್ಟು ಏರಿಕೆ?

ಹೊಸದಿಗಂತ ಡಿಜಿಟಲ್‌ ಡೆಸ್ಕ್‌: 

ರಾಜ್ಯ ಸಾರಿಗೆ ಸಂಸ್ಥೆ ಬಸ್ ಗಳಲ್ಲಿ ಪ್ರಯಾಣ ದರ ಹೆಚ್ಚಳದ ನಂತರ ಇದೀಗ ಮೆಟ್ರೋ ಪ್ರಯಾಣ ದರವನ್ನು ಹೆಚ್ಚಿಸಲಾಗುತ್ತಿದ್ದು, ಪ್ರಯಾಣಿಕರಿಗೆ ಮತ್ತೊಂದು ಹೊರೆಯಾಗಿದೆ. ಮೂಲಗಳ ಪ್ರಕಾರ ನಮ್ಮ ಮೆಟ್ರೋ ಸುಮಾರು ಶೇ. 43 ರಷ್ಟು ಪ್ರಯಾಣ ದರವನ್ನು ಹೆಚ್ಚಿಸುವ ಸಾಧ್ಯತೆಯಿದೆ.

ಜನದಟ್ಟಣೆ ಇಲ್ಲದ ಸಮಯದಲ್ಲಿ ಮೆಟ್ರೋ ಪ್ರಯಾಣದ ಟೋಕನ್ ಬಳಸುವ ಪ್ರಯಾಣಿಕರಿಗೆ ಈ ದರದಲ್ಲಿ ಶೇ. 5 ರಷ್ಟು ರಿಯಾಯಿತಿ ಇರಲಿದೆ. ಪ್ರಸ್ತುತ ಕನಿಷ್ಠ ದರ ರೂ. 10 ಮತ್ತು ಗರಿಷ್ಠ ದರ ರೂ. 60 ಆಗಿದೆ. ಟ್ರಾವೆಲ್ ಕಾರ್ಡ್ ಬಳಕೆದಾರರಿಗೆ ಅದರ ಮೇಲೆ ಶೇ. 5 ರಷ್ಟು ರಿಯಾಯಿತಿ ಇದೆ.

ಶುಕ್ರವಾರ ದರ ನಿಗದಿ ಸಮಿತಿಯ ಶಿಫಾರಸುಗಳ ಕುರಿತು ಮಾತನಾಡಿದ ಬಿಎಮ್‌ಆರ್‌ಸಿಎಲ್ ವ್ಯವಸ್ಥಾಪಕ ನಿರ್ದೇಶಕ ಎಂ.ಮಹೇಶ್ವರ್‌ ರಾವ್‌ ಪ್ರಯಾಣ ದರ ಪರಿಷ್ಕರಣೆಗೆ ಸಂಬಂಧಿಸಿದ ವಿವರಗಳನ್ನು ಶನಿವಾರ ಬಹಿರಂಗಗೊಳಿಲು ಮೆಟ್ರೋ ಅಧಿಕಾರಿಗಳಿಗೆ ತಿಳಿಸಲಾಗಿದೆ ಎಂದರು. ಬೆಂಗಳೂರು ಸೆಂಟ್ರಲ್ ಸಂಸದ ಪಿಸಿ ಮೋಹನ್, ಮೆಟ್ರೋ ಪ್ರಯಾಣ ದರವನ್ನು ಶೇ, 45 ರಷ್ಟು ಏರಿಕೆ ಮಾಡಲಾಗುವುದು ಅನಿಸುತ್ತಿದೆ ಎಂದಿದ್ದಾರೆ.

ಪ್ರಯಾಣ ದರ ಹೆಚ್ಚಳವನ್ನು ಮೆಟ್ರೋ ಸಮರ್ಥಿಸಿಕೊಂಡಿದೆ. ಎಂಟು ವರ್ಷಗಳ ನಂತರ ಮೆಟ್ರೋ ಪ್ರಯಾಣ ದರವನ್ನು ಪರಿಷ್ಕರಿಸಲಾಗುತ್ತಿದೆ. ರೈಲ್ವೆ ಜಾಲ ವಿಸ್ತರಣೆಯಾಗಿದ್ದು, ಕಾರ್ಯಾಚರಣೆ ವೆಚ್ಚ ಹೆಚ್ಚಾಗಿದೆ. ಸಮಿತಿಯ ಶಿಫಾರಸುಗಳು ಬದ್ಧವಾಗಿವೆ. ಈ ಹಿಂದೆ ಜೂನ್ 18, 2017 ರಂದು ಪ್ರಯಾಣ ದರವನ್ನು ಶೇ. 10 ರಿಂದ 15 ರಷ್ಟು ಹೆಚ್ಚಳ ಮಾಡಲಾಗಿತ್ತು ಎಂದು ಹೇಳಿದೆ.

ಮತ್ತೊಂದು ಮೂಲಗಳ ಪ್ರಕಾರ ಟೋಕನ್ ಬಳಸುವ ಪ್ರಯಾಣಿಸುವ ಪ್ರಯಾಣಿಕರಿಗೆ ಮಾತ್ರ ದರ ಹೆಚ್ಚಳ ಅನ್ವಯವಾಗಲಿದೆ. ಏಕೆಂದರೆ ಪೀಕ್ ಅವರ್‌ಗಳಲ್ಲಿ ಪ್ರಯಾಣಿಸದವರಿಗೆ ಶೇ.5 ರಷ್ಟು ವಿನಾಯಿತಿ ಇರಲಿದೆ. ಮೂಲ ದರದಲ್ಲಿ ಏರಿಕೆ ಇರುವುದಿಲ್ಲ ಮತ್ತು ಕನಿಷ್ಠ ದರವು ರೂ. 10 ಇರಲಿದೆ ಎಂದು ಅಧಿಕಾರಿಯೊಬ್ಬರು ತಿಳಿಸಿದ್ದಾರೆ.

- Advertisement - Ply

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

1 COMMENT

  1. ಶ್ರೀಮಂತರ ಬಿಲ್ ಬೇಗ ಆಗುತ್ತೆ.ನಮ್ಮಂಥವರ ಬಿಲ್ ದೇವರೇ ಗತಿ

LEAVE A REPLY

Please enter your comment!
Please enter your name here

error: Content is protected !!