ರಸ್ತೆ ಬದಿ ನಿಲ್ಲಿಸಿದ್ದ ಕಾರ್‌ಗೆ ವೇಗವಾಗಿ ಬಂದು ಡಿಕ್ಕಿ ಹೊಡೆದ ಮತ್ತೊಂದು ಕಾರ್‌: ನಾಲ್ವರಿಗೆ ಗಂಭೀರ ಗಾಯ

ಹೊಸದಿಗಂತ ವರದಿ ಹಾವೇರಿ:

ರಸ್ತೆ ಬದಿ ನಿಂತಿದ್ದ ಕಾರಿಗೆ ಮತ್ತೊಂದು ಕಾರ್ ಡಿಕ್ಕಿಯಾಗಿ ನಾಲ್ವರಿಗೆ ಗಂಭೀರ ಗಾಯವಾಗಿ, 6 ಜನರಿಗೆ ಸಣ್ಣ ಪುಟ್ಟ ಗಾಯಗಳಾದ ಘಟನೆ ಮಂಗಳವಾರ ನಡೆದಿದೆ.

ಹಾವೇರಿ ಜಿಲ್ಲೆ ಬ್ಯಾಡಗಿ ತಾಲೂಕು ಛತ್ರ ಬಳಿ‌ ರಾಷ್ಟ್ರೀಯ ಹೆದ್ದಾರಿ ಮೇಲೆ ಈ ಅಪಘಾತ ನಡೆದಿದ್ದು, ಆಂದ್ರ ಮೂಲದ ಯುವಕರ ತಂಡ ಹೊಸ ವರ್ಷದ ಆಚರಣೆ ಮಾಡಲೆಂದು ಗೋವಾಗೆ ತೆರಳುತ್ತಿದ್ದರು. ವಿರೇಶ, ಲಕ್ಷ್ಮಣ, ಅಶೋಕ, ಗೌಡನಬಿ, ವೆಂಕಟೇಶ ಗೋವಾಗೆ ತೆರಳುತ್ತಿದ್ದವರು.

ಇವರ ಕಾರು ಬ್ಯಾಡಗಿ ತಾಲೂಕು ಛತ್ರ ಬಳಿ ರಾಷ್ಟ್ರೀಯ ಹೆದ್ದಾರಿ ಬದಿಯಲ್ಲಿ ನಿಂತಿದ್ದ ದಾವಣಗೆರೆ ಮೂಲದವರ ಕಾರಿಗೆ ಡಿಕ್ಕಿ ಹೊಡೆದಿದೆ.

ಕಾರಿನಲ್ಲಿದ್ದ ದಾವಣಗೆರೆ ಮೂಲದ ತೇಜಸ್, ಸಾಗರ, ಸಂಕೇತ, ಸಂದೇಶ, ದೀಪಕ್ ಎಂಬ ಯುವಕರಿಗೆ ಗಾಯವಾಗಿದೆ. ಗಂಭೀರವಾಗಿ ಗಾಯಗೊಂಡಿದ್ದ ನಾಲ್ವರನ್ನು ದಾವಣಗೆರೆ ಆಸ್ಪತ್ರೆಗೆ ರವಾನೆ ಮಾಡಲಾಗಿದೆ‌. ಉಳಿದ ಗಾಯಾಳುಗಳನ್ನು ಹಾವೇರಿ ಜಿಲ್ಲಾಸ್ಪತ್ರೆಗೆ ಚಿಕಿತ್ಸೆಗೆ ದಾಖಲಿಸಲಾಗಿದೆ. ಬ್ಯಾಡಗಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

- Advertisement - Prestige

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!