ಹೊಸದಿಗಂತ ಡಿಜಿಟಲ್ ಡೆಸ್ಕ್:
ಸಿಎಂ ಪತ್ನಿ ಪಾರ್ವತಮ್ಮ ಅವರಿಗೆ ಮತ್ತೊಂದು ಕಾನೂನು ಸಂಕಷ್ಟ ಎದುರಾಗಿದೆ. ಸಿಎಂ ಪತ್ನಿ ಹಾಗೂ ಸಿಎಂ ಭಾಮೈದ ಸೇರಿ ಒಟ್ಟು 10 ಜನರ ಮೇಲೆ ಈಗ ಮೈಸೂರಿನ ಸಿವಿಲ್ ನ್ಯಾಯಾಲಯದಲ್ಲಿ ಭೂ ವ್ಯಾಜ್ಯ ಸಂಬಂಧ ಕೇಸ್ ದಾಖಲಾಗಿದೆ.
ಸಿದ್ದರಾಮಯ್ಯ ಪತ್ನಿ ಪಾರ್ವತಮ್ಮಗೆ ಅವರ ಸಹೋದರ ಮಲ್ಲಿಕಾರ್ಜುನ ಸ್ವಾಮಿ ತವರಿನ ಉಡುಗೊರೆ ರೀತಿ ಕೊಟ್ಟ ಕೆಸರೆ ಭಾಗದ ಮೂರುವರೆ ಎಕರೆ ಜಮೀನಿಂದ ಈಗ ಕಾನೂನಿನ ದೊಡ್ಡ ಸಂಕಷ್ಟ ಸೃಷ್ಟಿಯಾಗಿದೆ.
ಕಳೆದ 4 ತಿಂಗಳಿಂದ ರಾಜ್ಯ ರಾಜಕೀಯದಲ್ಲಿ ಇದೇ ಜಮೀನು ಹಾಗೂ ಜಮೀನಿನಿಂದ ಸಿಕ್ಕ ಪರಿಹಾರ ರೂಪದ 14 ಸೈಟ್‌ಗಳು ಬಿರುಗಾಳಿ ಎಬ್ಬಿಸಿವೆ. ಹಲವು ತನಿಖೆಗಳು ಇದರಿಂದ ನಡೆಯುತ್ತಿವೆ. ಈಗ ಈ ಪ್ರಕರಣಕ್ಕೆ ರೋಚಕ ಟ್ವಿಸ್ಟ್ ಸಿಕ್ಕಿದ್ದು ಪ್ರಕರಣದ ಮೂಲ ಭೂಮಿಯ ಬಗ್ಗೆಯೆ ಈಗ ವಿವಾದ ಹುಟ್ಟಿಕೊಂಡಿದೆ.