ಶಾಸಕ ಬಸನಗೌಡ ಪಾಟೀಲ್ ಯತ್ನಾಳ್​ ವಿರುದ್ಧ ಮತ್ತೊಂದು ದೂರು ದಾಖಲು

ಹೊಸದಿಗಂತ ಡಿಜಿಟಲ್ ಡೆಸ್ಕ್:

ಸಚಿವ ದಿನೇಶ್ ಗುಂಡೂರಾವ್​ ಮನೆಯಲ್ಲಿ ಅರ್ಧ ಪಾಕಿಸ್ತಾನ​ ಇದೆ ಎಂಬ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್​ (Basangouda Patil Yatnal) ವಿರುದ್ಧ ಮತ್ತೊಂದು ದೂರು ದಾಖಲಾಗಿದೆ.

ಬೆಂಗಳೂರಿನ ಸಂಜಯನಗರ ಪೊಲೀಸ್ ಠಾಣೆಗೆ ಸಚಿವ ದಿನೇಶ್ ಗುಂಡೂರಾವ್ ಪತ್ನಿ ಟಬು ರಾವ್ ದೂರು ನೀಡಿದ್ದಾರೆ.

ಇದಕ್ಕೂ ಮುಂಚೆ ಟಬು ರಾವ್ ಅವರು ಶಾಸಕ ಯತ್ನಾಳ್​ ವಿರುದ್ಧ ಕಠಿಣ ಕ್ರಮಕೈಗೊಳ್ಳುವಂತೆ ಬಿಜೆಪಿ ನಾಯಕರಿಗೆ ತಮ್ಮ ಟ್ವಿಟರ್​ ಖಾತೆಯಲ್ಲಿ ಮನವಿ ಮಾಡಿಕೊಂಡಿದ್ದರು. ಅದರ ಬೆನ್ನಲ್ಲೇ ದೂರು ನೀಡಿದ್ದಾರೆ.

ದೂರು ನೀಡಿದ ಬಳಿಕ ಮಾಧ್ಯಮದವರೊಂದಿಗೆ ಮಾತನಾಡಿದ ಟಬು ರಾವ್, ಬಸನಗೌಡ ಪಾಟೀಲ್ ಯತ್ನಾಳ್ ಯಾರು ನನಗೆ ಗೊತ್ತಿಲ್ಲ. ನಾನು ರಾಜಕೀಯದಲ್ಲಿಲ್ಲ, ನನಗೇಕೆ ಹೀಗೆ ಹೇಳಿದ್ದಾರೆ ಗೊತ್ತಿಲ್ಲ. ಈ ರೀತಿ ಮಾತನಾಡೋದೆ ರಾಜಕೀಯನಾ ಎಂದು ಪ್ರಶ್ನೆ ಮಾಡಿದ್ದಾರೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!