ಹೊಸದಿಗಂತ ಡಿಜಿಟಲ್ ಡೆಸ್ಕ್ :
ಕಾಂಗ್ರೆಸ್ ನಾಯಕ ರಾಹುಲ್ ಗಾಂದಿ ಅಂತೆ ಮತ್ತೊರ್ವ ಕಾಂಗ್ರೆಸ್ ನಾಯಕ ಪ್ರಧಾನಿ ಮೋದಿ ವಿರುದ್ಧ ಅಸಭ್ಯ ಹಾಗೂ ಆಕ್ಷೇಪಾರ್ಹ ಹೇಳಿಕೆ ನೀಡಿದ್ದು, ಈ ಹಿನ್ನೆಲೆ ಪ್ರಕರಣ ದಾಖಲಾಗಿದೆ.
ಉತ್ತರ ಪ್ರದೇಶ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಸಚಿನ್ ಚೌಧರಿ ಅದಾನಿ ಪ್ರಕರಣದಲ್ಲಿ ಮೋದಿ ಕೈವಾಡ ಕುರಿತು ಹೇಳಿಕೆ ನೀಡುವಾಗ ಪ್ರಧಾನಿ ಮೋದಿ ವಿರುದ್ಧ ಅಸಭ್ಯ ಹೇಳಿಕೆ ನೀಡಲಾಗಿದ್ದು,ಪ್ರಕರಣ ದಾಖಲಾಗಿದೆ.
ಈ ಅಕ್ಷೇಪಾರ್ಹ ಹೇಳಿಕೆ ವಿರುದ್ಧ ಉತ್ತರ ಪ್ರದೇಶ ಬಿಜೆಪಿ ಯುವಮೋರ್ಚಾ ನಾಯಕ ಅಕ್ಷಿತ್ ಅಗರ್ವಾಲ್ ಪ್ರಕರಣ ದಾಖಲಿಸಿದ್ದಾರೆ. ಈ ಕುರಿತು ಪ್ರಕರಣ ದಾಖಲಿಸಿಕೊಂಡಿರುವ ಅಡೀಶನಲ್ ಸೂಪರಿಡೆಂಟ ಆಫ್ ಪೊಲೀಸ್ ಶ್ರಿಶ್ ಚಂದ್ರ, ತನಿಖೆ ನಡೆಸುವುದಾಗಿ ಹೇಳಿದ್ದಾರೆ.
ಅದಾನಿ ಪ್ರಕರಣ ಕುರಿತು ಸಚಿನ್ ಚೌಧರಿ ಬಿಜೆಪಿ ವಿರುದ್ದ ಹಲವು ಆರೋಪ ಮಾಡಿದ್ದಾರೆ. ಸತ್ಯಕ್ಕೆ ದೂರವಾದ ಮಾತುಗಳನ್ನೇ ಹೇಳಿದ್ದಾರೆ. ಅದಾನಿ, ಮೋದಿ ಹಾಗೂ ಬಿಜೆಪಿ ಸರ್ಕಾರವನ್ನು ಟೀಕಿಸುವ ಭರದಲ್ಲಿ ಸಚಿನ್ ಚೌಧರಿ ಎಲ್ಲೆ ಮೀರಿದ್ದಾರೆ. ಪ್ರಧಾನಿ ಮೋದಿ ವಿರುದ್ಧ ಅಸಭ್ಯ ಹೇಳಿಕೆ ನೀಡಿದ್ದಾರೆ. ಈ ರೀತಿಯ ಅಕ್ಷೇಪಾರ್ಹ ಹೇಳಿಕೆ ವಿರುದ್ದ ಪ್ರಕರಣ ದಾಖಲಿಸಿದ್ದೇನೆ ಎಂದು ಅಕ್ಷಿತ್ ಅಗರ್ವಾಲ್ ಹೇಳಿದ್ದಾರೆ.
ಸಚಿನ್ ಚೌಧರಿ ನೀಡಿರುವ ಹೇಳಿಕೆ ವಿಡಿಯೋವನ್ನು ಪೊಲೀಸರಿಗೆ ನೀಡಲಾಗಿದೆ. ಟೀಕಿಸುವ ಭರದಲ್ಲಿ ಏನು ಬೇಕಾದರೂ ಹೇಳಬಹುದು ಅನ್ನೋ ಕಾಂಗ್ರೆಸ್ ಮನಸ್ಥಿತಿಯನ್ನು ಅಂತ್ಯಗೊಳಿಸುತ್ತೇವೆ. ಕಾನೂನಿನ ಚೌಕಟ್ಟು ಮೀರಬಾರದು. ಇದು ಎಲ್ಲರಿಗೂ ಅನ್ವಯವಾಗುತ್ತದೆ. ಕಾಂಗ್ರೆಸ್ ನಾಯಕರು ಕಾನೂನಿಗಿಂತ ಹೊರತಲ್ಲ. ಕೋರ್ಟ್ ಆದೇಶಕ್ಕೆ ಗೌರವ ಕೊಡದ ಕಾಂಗ್ರೆಸ್‌ನಿಂದ ಇದಕ್ಕಿಂತ ಹೆಚ್ಚೇನು ನಿರೀಕ್ಷಿಸಲು ಸಾಧ್ಯವಿಲ್ಲ ಎಂದು ಅಗರ್ವಾಲ್ ಆಕ್ರೋಶ ಹೊರಹಾಕಿದ್ದಾರೆ.