ಮತ್ತೊಂದು ಚಂಡಮಾರುತ ಎಂಟ್ರಿ: ಬೆಂಗಳೂರಿನಲ್ಲಿ ಬೆಳ್ಳಂಬೆಳಗ್ಗೆಯೇ ತುಂತುರು ಮಳೆ

ಹೊಸದಿಗಂತ ಡಿಜಿಟಲ್‌ ಡೆಸ್ಕ್‌: 

ಬೆಂಗಳೂರಿನಲ್ಲಿ ಬೆಳಗ್ಗೆಯಿಂದಲೇ ತುಂತುರು ಮಳೆ ಶುರುವಾಗಿದೆ, ಡಿಸೆಂಬರ್ 18ರವರೆಗೂ ಮಳೆ ಮುಂದುವರೆಯಲಿರುವ ಸಾಧ್ಯತೆ ಇದೆ.

ಕಳೆದ ಒಂದು ವಾರದ ಹಿಂದಷ್ಟೇ ತಮಿಳುನಾಡು, ಕರ್ನಾಟಕ, ಆಂಧ್ರಪ್ರದೇಶದಲ್ಲಿ ಫೆಂಗಲ್ ಚಂಡಮಾರುತದಿಂದಾಗಿ ಸಾಕಷ್ಟು ಅವ್ಯವಸ್ಥೆ ಸೃಷ್ಟಿಯಾಗಿತ್ತು. ಇದೀಗ ಬಂಗಾಲಕೊಲ್ಲಿಯಲ್ಲಿ ಮತ್ತೊಂದು ಚಂಡಮಾರುತ ರೂಪುಗೊಳ್ಳುತ್ತಿದ್ದು, ಅದರ ಪರಿಣಾಮ ಈಗಾಗಲೇ ಬೆಂಗಳೂರಿನ ಮೇಲೆ ಗೋಚರಿಸಲಾರಂಭಿಸಿದೆ.

ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಚಾಮರಾಜನಗರ, ಚಿತ್ರದುರ್ಗ, ಕೊಡಗು, ಕೋಲಾರ, ಮಂಡ್ಯ, ಮೈಸೂರು, ರಾಮನಗರ, ತುಮಕೂರು ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್​ ಘೋಷಿಸಲಾಗಿದೆ. ದಕ್ಷಿಣ ಕನ್ನಡ, ಉಡುಪಿ, ಉತ್ತರ ಕನ್ನಡ, ಚಿಕ್ಕಬಳ್ಳಾಪುರ, ಚಿಕ್ಕಮಗಳೂರು, ದಾವಣಗೆರೆ, ಶಿವಮೊಗ್ಗ, ವಿಜಯನಗರದಲ್ಲಿ ಸಾಧಾರಣ ಮಳೆಯಾಗಲಿದೆ. ಯಾದಗಿರಿ, ವಿಜಯಪುರ, ರಾಯಚೂರು, ಕೊಪ್ಪಳ, ಕಲಬುರಗಿ, ಹಾವೇರಿ, ಗದಗ, ಧಾರವಾಡ, ಬೀದರ್, ಬೆಳಗಾವಿ, ಬಾಗಲಕೋಟೆಯಲ್ಲಿ ಒಣಹವೆ ಇರಲಿದೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!