ಮಾಂಡೌಸ್ ಚಂಡಮಾರುತದ ಬೆನ್ನಲ್ಲೇ ಮತ್ತೊಂದು ಸೈಕ್ಲೋನ್ ಭೀತಿ!

ಹೊಸದಿಗಂತ ಡಿಜಿಟಲ್ ಡೆಸ್ಕ್:

ಮಾಂಡೌಸ್ ಚಂಡಮಾರುತದ ಅಬ್ಬರದಿಂದ ತಮಿಳುನಾಡು,ಕೇರಳ, ಆಂಧ್ರಪ್ರದೇಶ ಹಾಗೂ ಕರ್ನಾಟಕದಲ್ಲಿ ಭಾರೀ ಮಳೆಯಾಗುತ್ತಿದೆ. ಇನ್ನೂ ಮೂರು ದಿನ ಮಳೆ ಮುಂದುವರಿಯುವ ಸಾಧ್ಯತೆ ಇದೆ.

ಸೈಕ್ಲೋನ್ ಬೆನ್ನಲ್ಲೇ ಮತ್ತೊಂದು ಸೈಕ್ಲೋನ್ ಭೀತಿ ಎದುರಾಗಿದೆ ಎಂದು ಭಾರತೀಯ ಹವಾಮಾನ ಇಲಾಖೆ ತಿಳಿಸಿದೆ. ಈ ಚಂಡಮಾರುತವು ಭಾರತದ ಕರಾವಳಿಯಿಂದ ಪಶ್ಚಿಮ ವಾಯುವ್ಯದ ಕಡೆಗೆ ಚಲಿಸುವ ಸಾಧ್ಯತೆಯಿದ್ದು, ಡಿ.14,15 ಅಂಡಮಾನ್ ಮತ್ತು ನಿಕೋಬಾರ್‌ನಲ್ಲಿ ವ್ಯಾಪಕವಾದ ಮಳೆಯಾಗುವ ಸಾಧ್ಯತೆ ಇದೆ.

ಇಂದು ಮತ್ತು ನಾಳೆ ಆಗ್ನೇಯ ಮತ್ತು ಪೂರ್ವ ಅರೇಬಿಯನ್ ಸಮುದ್ರದಲ್ಲಿ ಹಾಗೂ ಕೇರಳ-ಕರ್ನಾಟಕ ಕರಾವಳಿಯಲ್ಲಿ ಭಾರೀ ವೇಗದಲ್ಲಿ ಗಾಳಿ ಬೀಸುವ ಸಾಧ್ಯತೆ ಇದೆ. ಹೀಗಾಗಿ ಮೀನುಗಾರರು ಸಮುದ್ರಕ್ಕೆ ಇಳಿಯದಂತೆ ಸೂಚಿಸಲಾಗಿದೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!