ಹೊಸದಿಗಂತ ಡಿಜಿಟಲ್ ಡೆಸ್ಕ್:
ಬೆಂಗಳೂರಿನಲ್ಲೂ ಸಿಲಿಂಡರ್ ಸ್ಫೋಟ ಸಂಭವಿಸಿದ್ದು, ಅಂಗಡಿಯೊಂದು ಸಂಪೂರ್ಣ ಧ್ವಂಸಗೊಂಡಿದೆ.
ಬೆಂಗಳೂರಿನ ಎಂಎಸ್‌ಆರ್ ನಗರದಲ್ಲಿ ಈ ಘಟನೆ ನಡೆದಿದೆ. ಬೀಗ ಹಾಕಿದ್ದ ಅಂಗಡಿಯಲ್ಲಿ ಸಿಲಿಂಡರ್ ಸ್ಫೋಟ ಸಂಭವಿಸಿದ್ದು, ಸುತ್ತಮುತ್ತಲಿನ ಅಂಗಡಿಗಳಿಗೆ ಅಪಾರ ಹಾನಿಯಾಗಿದೆ.
ಬೆಂಗಳೂರಿನ ಸದಾಶಿವನಗರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ. ಅದೃಷ್ಟವಶಾತ್ ಯಾವುದೇ ಅವಘಡ ಸಂಭವಿಸಿಲ್ಲ. ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.