ಹೊಸದಿಗಂತ ಡಿಜಿಟಲ್ ಡೆಸ್ಕ್:
ರಾಯಚೂರು ಜಿಲ್ಲೆಯಲ್ಲಿ ಬಾಣಂತಿಯರ ಸರಣಿ ಸಾವು ಮುಂದುವರೆದಿದ್ದು, ಇದೀಗ ಮತ್ತೋರ್ವ ಬಾಣಂತಿ ಸಾವನ್ನಪ್ಪಿರುವುದು ಬೆಳಕಿಗೆ ಬಂದಿದೆ. ಮೃತ ಬಾಣಂತಿಯನ್ನು ಈಶ್ವರಿ (32) ಎಂದು ಗುರುತಿಸಲಾಗಿದೆ.
ಕಳೆದ ಭಾನುವಾರ (ಡಿ.8) ಈಶ್ವರಿಗೆ ಮಟಮಾರಿ ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ಸಹಜ ಹೆರಿಗೆಯಾಗಿತ್ತು. ಹೆರಿಗೆಯಾಗಿ ಮನೆಗೆ ತೆರಳಿದಾಗ ರಕ್ತಸ್ರಾವ, ಜ್ವರ ಹಾಗೂ ಆಯಾಸದಿಂದಾಗಿ ಮತ್ತೆ ಮಟಮಾರಿ ಆರೋಗ್ಯ ಕೇಂದ್ರಕ್ಕೆ ಕರೆದೊಯ್ಯಲಾಗಿತ್ತು.
ಆದರೆ, ಅಲ್ಲಿನ ಸಿಬ್ಬಂದಿ ನಿರ್ಲಕ್ಷ್ಯ ಮಾಡಿದ್ದ ಹಿನ್ನೆಲೆ ರಿಮ್ಸ್ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ ಚಿಕಿತ್ಸೆ ಫಲಕಾರಿಯಾಗದೇ ಸಾವನ್ನಪ್ಪಿದ್ದಾರೆ.