ಚೀನಾದಲ್ಲಿ ಮತ್ತೊಂದು ಡೆಡ್ಲಿ ವೈರಸ್ ಪತ್ತೆ: ಭಾರತದಲ್ಲಿ ಹೈ ಅಲರ್ಟ್ ಘೋಷಿಸಿದ ಕೇಂದ್ರ ಆರೋಗ್ಯ ಇಲಾಖೆ!

ಹೊಸದಿಗಂತ ಡಿಜಿಟಲ್‌ ಡೆಸ್ಕ್:‌

ಚೀನಾದಲ್ಲಿ (China) ನ್ಯೂಮೋನಿಯಾ ಮಾದರಿಯ ಮತ್ತೊಂದು ಡೆಡ್ಲಿ ವೈರಸ್ ಪತ್ತೆಯಾಗಿದೆ.

ಇದರ ಬೆನ್ನಲ್ಲೇ ಕೇಂದ್ರ ಆರೋಗ್ಯ ಇಲಾಖೆಯು (Central Health Department) ಭಾರತದಲ್ಲಿ ಹೈ ಅಲರ್ಟ್ ಘೋಷಿಸಿದ್ದು, ಸಾರ್ವಜನಿಕರ ಆರೋಗ್ಯ ದೃಷ್ಟಿಯಿಂದ ಆಸ್ಪತ್ರೆಯಲ್ಲಿ ಕೈಗೊಂಡಿರುವ ಮುಂಜಾಗ್ರತಾ ಕ್ರಮಗಳನ್ನು ತಕ್ಷಣವೇ ಪರಿಶೀಲಿಸುವಂತೆ ರಾಜ್ಯ ಸರ್ಕಾರಗಳಿಗೆ ಖಡಕ್‌ ಸೂಚನೆ ಕೊಟ್ಟಿದೆ.

ಕೇಂದ್ರ ಆರೋಗ್ಯ ಸಚಿವಾಲಯದ ಕಾರ್ಯದರ್ಶಿ ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳಿಗೆ ಪತ್ರ ಬರೆದಿದ್ದಾರೆ. ಆಸ್ಪತ್ರೆಗಳಲ್ಲಿ ಹಾಸಿಗೆಗಳು, ಔಷಧಗಳು, ಇನ್ಫ್ಲುಯೆನ್ಸಾ ಲಸಿಕೆಗಳು, ಆಕ್ಸಿಜನ್‌, ಆ್ಯಂಟಿಬಯೊಟಿಕ್‌, ವೈಯಕ್ತಿಕ ಸುರಕ್ಷತೆಯ ಸಾಧನಗಳು ಇತರೇ ಪರೀಕ್ಷಾ ಕಿಟ್‌ಗಳಂತಹ ಮೂಲ ಸೌಕರ್ಯಗಳನ್ನು ಹೆಚ್ಚಿಸಲು ಕ್ರಮ ತೆಗೆದುಕೊಳ್ಳುವಂತೆ ನಿರ್ದೇಶನ ನೀಡಿದ್ದಾರೆ.

ಎಲ್ಲಾ ರಾಜ್ಯಗಳು ಹಾಗೂ ಕೇಂದ್ರಾಡಳಿತ ಪ್ರದೇಶಗಳು ಮುನ್ನೆಚ್ಚರಿಕೆ ಕ್ರಮವಾಗಿ ಅಗತ್ಯವಿದ್ದರೆ ಕೋವಿಡ್‌ ಸಂದರ್ಭದಲ್ಲಿ ಅನುಸರಿಸಲಾದ ಮಾರ್ಗಸೂಚಿಗಳನ್ನು ಜಾರಿಗೆ ತರಬೇಕು. ಅಲ್ಲದೇ ಸೋಂಕಿನ ಲಕ್ಷಣಗಳು ಮತ್ತು ತೀವ್ರ ಉಸಿರಾಟದ ಸಮಸ್ಯೆಗಳು ಹೊಂದಿರುವವರ ಮೇಲೆ ತೀವ್ರ ನಿಗಾ ವಹಿಸುವಂತೆ ಎಚ್ಚರಿಕೆ ನೀಡಿದ್ದಾರೆ.

ಇಂಟಿಗ್ರೇಟೆಡ್ ಡಿಸೀಸ್ ಸರ್ವೆಲೆನ್ಸ್ ಯೋಜನೆ ಅಡಿಯಲ್ಲಿ ಹದಿಹರೆಯದವರು ಮತ್ತು ಮಕ್ಕಳ ಬಗ್ಗೆ ಹೆಚ್ಚಿನ ನಿಗಾ ವಹಿಸಬೇಕು. ಜೊತೆಗೆ ವೈದ್ಯಕೀಯ ಕಾಲೇಜು ಆಸ್ಪತ್ರೆಗಳು ಮತ್ತು ಇತರೇ ಸಾರ್ವಜನಿಕ ಆಸ್ಪತ್ರೆಗಳಲ್ಲಿ ಐಎಲ್‌ಐ ಮತ್ತು ಸಾರಿ ಪ್ರಕರಣಗಳು ಪತ್ತೆಯಾದಲ್ಲಿ, ಅಂತಹ ಪ್ರಕರಣಗಳ ಮಾಹಿತಿಯನ್ನ ಐಡಿಎಸ್‌ಪಿ-ಐಹೆಚ್‌ಐಪಿ ಪೋರ್ಟಲ್‌ನಲ್ಲಿ ಅಪ್‌ಲೋಡ್‌ ಮಾಡಬೇಕಾಗುತ್ತದೆ. ಅಲ್ಲದೇ ಗಂಟಲು ದ್ರವ ಮತ್ತು ಸಾರಿ ಪ್ರಕರಣಗಳ ಪರೀಕ್ಷೆ ಕೈಗೊಳ್ಳಬೇಕು. ಅದರಲ್ಲೂ ಮಕ್ಕಳ ಮಾದರಿ ಪರೀಕ್ಷೆ ಮಾಡಿ ಮಾದರಿಗಳನ್ನು ವೈರಸ್ ಸಂಶೋಧನೆ ಮತ್ತು ರೋಗನಿರ್ಣಯ ಪ್ರಯೋಗಾಲಯಗಳಿಗೆ ಕಳುಹಿಸಬೇಕು ಎಂದು ಸೂಚಿಸಿದ್ದಾರೆ.

ಚೀನಾದಲ್ಲಿ ನ್ಯೂಮೋನಿಯಾ (Pneumonia) ಮಾದರಿಯ ಲಕ್ಷಣಗಳುಳ್ಳ ಈ ವೈರಸ್‌ ನೇರವಾಗಿ ಶ್ವಾಸಕೋಶದ ಮೇಲೆ ಪರಿಣಾಮ ಬೀರಲಿದ್ದು, ಉಸಿರಾಟದ ಸಮಸ್ಯೆ ಉಂಟಾಗುತ್ತದೆ. ಆದ್ದರಿಂದ ಚೀನಾದಲ್ಲಿ ಈಗಾಗಲೇ ಶಾಲೆಗಳಿಗೆ ರಜೆ ಘೋಷಿಸಲಾಗಿದೆ. ರೋಗಿಗಳ ಸಂಖ್ಯೆ ಹೆಚ್ಚಾಗುತ್ತಿದ್ದು, ಆಸ್ಪತ್ರೆಗಲ್ಲಿ ಹಾಸಿಗೆಗಳೂ ಫಿಲ್‌ ಆಗುತ್ತಿವೆ. ಈ ಹಿನ್ನೆಲೆಯಲ್ಲಿ ಭಾರತದಲ್ಲಿ ಮುನ್ನೆಚ್ಚರಿಕಾ ಕ್ರಮಗಳ ಬಗ್ಗೆ ಕೇಂದ್ರ ನಿಗಾ ವಹಿಸಿದೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!