Wednesday, July 6, 2022

Latest Posts

ರಾಜ್ಯ ರಾಜಧಾನಿಯ ರಸ್ತೆ ಗುಂಡಿಗೆ ಮತ್ತೊಂದು ಜೀವ ಬಲಿ

ಹೊಸದಿಗಂತ ಡಿಜಿಟಲ್ ಡೆಸ್ಕ್:

ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿ ದಿನನಿತ್ಯ ಅಪಘಾತ ಹೆಚ್ಚುತ್ತಿದ್ದು, ಇದೀಗ ರಸ್ತೆ ಗುಂಡಿಯಿಂದಾಗಿ ಮತ್ತೊಂದು ಜೀವ ಬಲಿಯಾಗಿದೆ.
ಮಾಗಡಿ ಮುಖ್ಯ ರಸ್ತೆಯ ಬ್ಯಾಡರಹಳ್ಳಿಯಲ್ಲಿ ಗುಂಡಿ ತಪ್ಪಿಸಲು ಹೋಗಿ ಆಯತಪ್ಪಿ ಬಿದ್ದಿದ್ದ ಮಹಿಳೆ ಮೇಲೆ ಲಾರಿ ಹರಿದು ಸಾವನ್ನಪ್ಪಿದ ಘಟನೆ ಸಂಭವಿಸಿದೆ.
ದ್ವೀಚಕ್ರ ವಾಹನದಲ್ಲಿ ತೆರಳುತ್ತಿದ್ದ ಮಹಿಳೆ ಗುಂಡಿ ತಪ್ಪಿಸಲು ಹೋಗಿ ಆಯತಪ್ಪಿ ಬಿದ್ದಿದ್ದು, ಈ ವೇಳೆ ಲಾರಿ ಹರಿದು ಮಹಿಳೆ ಸ್ಥಳದಲ್ಲೇ ಮೃತಪಟ್ಟಿದ್ದಾರೆ.
ಮೃತಪಟ್ಟ ಮಹಿಳೆಯನ್ನು ಶರ್ಮಿಳಾ (30) ಎಂದು ಗುರುತಿಸಲಾಗಿದೆ. ಲಾರಿ ಚಾಲಕ ಮಾದೇಶನನ್ನು ಪೊಲೀಸರು ಬಂಧಿಸಿದ್ದಾರೆ.
ಬ್ಯಾಡರಹಳ್ಳಿ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದೆ.

ಈ ಸುದ್ದಿ ಇತರರೊಂದಿಗೂ ಹಂಚಿಕೊಳ್ಳಿ

Whatsapp Group
Telegram

Latest Posts

Don't Miss