ಹೊಸದಿಗಂತ ಡಿಜಿಟಲ್ ಡೆಸ್ಕ್:
ಬಹುಭಾಷಾ ನಟಿ ರಶ್ಮಿಕಾ ಮಂದಣ್ಣ ಅವರ ಮತ್ತೊಂದು ಡೀಪ್‌ಫೇಕ್ ವಿಡಿಯೋ ಸೋಷಿಯಲ್ ಮೀಡಿಯಾದಲ್ಲಿ ವೈರಲ್ ಆಗಿದೆ.
ತಿಂಗಳ ಹಿಂದೆಯಷ್ಟೇ ಇವರ ಡೀಪ್‌ಫೇಕ್ ವಿಡಿಯೋ ಸಾಕಷ್ಟು ಸದ್ದು ಮಾಡಿತ್ತು. ಸರಕಾರದ ಮಟ್ಟದಲ್ಲಿ ಚರ್ಚೆಗೂ ಕಾರಣವಾಗಿತ್ತು. ಕೇಂದ್ರ ಸರಕಾರ ಕೂಡ ಇದನ್ನು ಗಂಭೀರವಾಗಿ ತೆಗೆದುಕೊಂಡು, ಡೀಪ್‌ಫೇಕ್ ಮಾಡುವವರ ವಿರುದ್ಧ ಕಠಿಣ ಕ್ರಮಕ್ಕೆ ಮುಂದಾಗುವುದಾಗಿ ಹೇಳಿತ್ತು. ಆದರೂ, ಡೀಪ್‌ಫೇಕ್ ಕಾಟ ಮುಂದುವರೆದಿದೆ.
ಡೀಪ್‌ನೆಕ್ ಬ್ಲಾಕ್ ಡ್ರೆಸ್‌ನಲ್ಲಿದ್ದ ಯುವತಿಯೊಬ್ಬರ ವಿಡಿಯೋವನ್ನು ಥೇಟ್ ರಶ್ಮಿಕಾ ಮಂದಣ್ಣ ಅವರಂತೆ ಮಾರ್ಫ್ ವಿಡಿಯೋ ಸೃಷ್ಟಿಸಿದ್ದರು. ವಿಡಿಯೋದಲ್ಲಿರುವುದು ರಶ್ಮಿಕಾ ಅಲ್ಲ, ಜರಾ ಪಟೇಲ್ ಎನ್ನುವುದು ಗೊತ್ತಾಗಿತ್ತು. ಡೀಪ್‌ಫೇಕ್ ತಂತ್ರಜ್ಞಾನ (Deepfake Technology) ಬಳಸಿ ರಶ್ಮಿಕಾ ಹೆಸರಿಗೆ ಮಸಿ ಬಳಿಯಲು ಕಿಡಿಗೇಡಿಗಳು ಯತ್ನಿಸಿದ್ದಕ್ಕೆ ನೆಟ್ಟಿಗರಿಂದ ತೀವ್ರ ಆಕ್ರೋಶ ವ್ಯಕ್ತವಾಗಿತ್ತು