August 13, 2026
Thursday, August 13, 2026
spot_img

ಕರಾವಳಿಗೆ ಶುರುವಾಗಿದೆ ಮತ್ತೆ ಮಳೆರಾಯನ ಅಬ್ಬರ: ಮೂರು ಜಿಲ್ಲೆಗಳಿಗೆ ಆರೆಂಜ್ ಅಲರ್ಟ್

ಹೊಸದಿಗಂತ ಡಿಜಿಟಲ್ ಡೆಸ್ಕ್:

ರಾಜ್ಯದ ವಿವಿಧ ಭಾಗಗಳಲ್ಲಿ ಮುಂಗಾರು ಮಳೆ ಮತ್ತೆ ಬಿರುಸುಗೊಂಡಿದ್ದು, ಕರಾವಳಿ ಮತ್ತು ಮಲೆನಾಡು ಪ್ರದೇಶಗಳಲ್ಲಿ ಮಳೆಯ ಪ್ರಮಾಣ ಇನ್ನಷ್ಟು ಹೆಚ್ಚಾಗುವ ಸಾಧ್ಯತೆ ಇದೆ. ಹವಾಮಾನ ಇಲಾಖೆ ಮುನ್ಸೂಚನೆಯ ಪ್ರಕಾರ, ಮುಂದಿನ ಕೆಲವು ದಿನಗಳಲ್ಲಿ ಹಲವೆಡೆ ವ್ಯಾಪಕ ಮಳೆಯಾಗಲಿದೆ.

ಕರಾವಳಿಯಲ್ಲಿ ಭಾರೀ ಮಳೆಯ ಎಚ್ಚರಿಕೆ

ದಕ್ಷಿಣ ಕನ್ನಡ, ಉಡುಪಿ ಹಾಗೂ ಉತ್ತರ ಕನ್ನಡ ಜಿಲ್ಲೆಗಳಲ್ಲಿ ಮಳೆಯ ತೀವ್ರತೆ ಹೆಚ್ಚಾಗುವ ಸಾಧ್ಯತೆ ಇರುವುದರಿಂದ ಶುಕ್ರವಾರಕ್ಕೆ ಆರೆಂಜ್ ಅಲರ್ಟ್ ಘೋಷಿಸಲಾಗಿದೆ. ಜೂನ್ 27 ಮತ್ತು 28ರವರೆಗೂ ಮಳೆ ಮುಂದುವರಿಯುವ ನಿರೀಕ್ಷೆಯಿದೆ.

ಮಲೆನಾಡಿನಲ್ಲೂ ಮುಂಗಾರು ಚುರುಕು

ಜೂನ್ 25ರಿಂದ ಮಲೆನಾಡು ಭಾಗದಲ್ಲಿ ಮಳೆ ಮತ್ತಷ್ಟು ಬಲ ಪಡೆಯುವ ಸಾಧ್ಯತೆ ಇದೆ. ಕೆಲವೆಡೆ ನಿರಂತರ ವರ್ಷಧಾರೆ ಕಂಡುಬರುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.

ಇದನ್ನೂ ಓದಿ:

ಯಾವ ಜಿಲ್ಲೆಗಳಲ್ಲಿ ಮಳೆ?

ಉತ್ತರ ಕನ್ನಡದಲ್ಲಿ ಗಂಟೆಗೆ 30ರಿಂದ 40 ಕಿ.ಮೀ ವೇಗದ ಗಾಳಿ ಬೀಸುವ ಸಾಧ್ಯತೆ ಇದೆ. ದಕ್ಷಿಣ ಕನ್ನಡ ಸೇರಿದಂತೆ ಬಳ್ಳಾರಿ, ಬೆಂಗಳೂರು ಗ್ರಾಮಾಂತರ, ಚಾಮರಾಜನಗರ, ಚಿಕ್ಕಬಳ್ಳಾಪುರ, ಚಿತ್ರದುರ್ಗ, ದಾವಣಗೆರೆ, ಕೋಲಾರ, ಮಂಡ್ಯ, ಮೈಸೂರು, ರಾಮನಗರ, ತುಮಕೂರು ಹಾಗೂ ವಿಜಯನಗರ ಜಿಲ್ಲೆಗಳಲ್ಲಿ ಸಹ ಸಾಧಾರಣ ಮಳೆಯ ಮುನ್ಸೂಚನೆ ನೀಡಲಾಗಿದೆ.

ಬೆಂಗಳೂರು ಹವಾಮಾನ ಹೇಗಿರಲಿದೆ?

ರಾಜಧಾನಿ ಬೆಂಗಳೂರಿನಲ್ಲಿ ಮೋಡ ಕವಿದ ವಾತಾವರಣ ಮುಂದುವರಿಯಲಿದ್ದು, ನಗರದ ಕೆಲ ಪ್ರದೇಶಗಳಲ್ಲಿ ಮಾತ್ರ ತುಂತುರು ಅಥವಾ ಸಾಧಾರಣ ಮಳೆಯಾಗುವ ಸಾಧ್ಯತೆ ಇದೆ.

Must Read

error: Copy ಬೇಡ, Coffee ಜೊತೆ ಹಂಚಿಕೊಳ್ಳಿ !