ಅಲೆಕ್ಸಾಂಡರ್ ಗೆ ಮತ್ತೆ ನಿರಾಸೆ: ಆಸ್ಟ್ರೇಲಿಯನ್ ಓಪನ್‌ ಗೆದ್ದ ಯಾನಿಕ್ ಸಿನ್ನರ್

ಹೊಸದಿಗಂತ ಡಿಜಿಟಲ್ ಡೆಸ್ಕ್:

2025 ರ ಆಸ್ಟ್ರೇಲಿಯನ್ ಓಪನ್‌ನಲ್ಲಿ ಇಟಾಲಿಯನ್ ಸ್ಟಾರ್ ಟೆನಿಸ್ ಆಟಗಾರ ಯಾನಿಕ್ ಸಿನ್ನರ್ ಪುರುಷರ ಸಿಂಗಲ್ಸ್ ಫೈನಲ್‌ ಪಂದ್ಯದಲ್ಲಿ ಜರ್ಮನಿಯ ಅಲೆಕ್ಸಾಂಡರ್ ಜ್ವೆರೆವ್ ಅವರನ್ನು 6-3, 7-6 (4), 6-3 ನೇರ ಸೆಟ್‌ಗಳಿಂದ ಸೋಲಿಸಿ ಚಾಂಪಿಯನ್ ಆಗಿ ಹೊರಹೊಮ್ಮಿದ್ದಾರೆ.

ಇದರ ಜೊತೆಗೆ ಹಾಲಿ ಚಾಂಪಿಯನ್ ಪಟ್ಟವನ್ನು ತಮ್ಮಲ್ಲೇ ಉಳಿಸಿಕೊಳ್ಳುವಲ್ಲಿ ಯಶಸ್ವಿಯಾಗಿದ್ದಾರೆ. ಅನಾರೋಗ್ಯದ ನಡುವೆಯೂ ಶ್ರೇಷ್ಠ ಪ್ರದರ್ಶನ ನೀಡಿದ ಯಾನಿಕ್ ಸಿನ್ನರ್, ಸತತ ಎರಡನೇ ಬಾರಿಗೆ ಆಸ್ಟ್ರೇಲಿಯನ್ ಓಪನ್ ಪ್ರಶಸ್ತಿ ಗೆಲ್ಲುವಲ್ಲಿ ಯಶಸ್ವಿಯಾಗಿದ್ದಾರೆ.

ಪ್ರಸ್ತುತ ಆಸ್ಟ್ರೇಲಿಯನ್ ಓಪನ್‌ ಗೆದ್ದಿರುವ ಯಾನಿಕ್ ಸಿನ್ನರ್​ಗೆ ಇದು ಕಳೆದ 13 ತಿಂಗಳುಗಳಲ್ಲಿ ಮೂರನೇ ಗ್ರ್ಯಾಂಡ್ ಸ್ಲಾಮ್ ಪ್ರಶಸ್ತಿಯಾಗಿದೆ. ಇದಕ್ಕೂ ಮೊದಲು ಅವರು 2024 ರ ಯುಎಸ್ ಓಪನ್ ಮತ್ತು ಕಳೆದ ಬಾರಿಯ ಆಸ್ಟ್ರೇಲಿಯನ್ ಓಪನ್ ಗೆಲ್ಲುವಲ್ಲಿಯೂ ಸಫಲರಾಗಿದ್ದರು. ಮತ್ತೊಂದೆಡೆ, ವಿಶ್ವ ನಂ.2 ಅಲೆಕ್ಸಾಂಡರ್ ಜ್ವೆರೆವ್ ಮತ್ತೊಮ್ಮೆ ಗ್ರ್ಯಾಂಡ್ ಸ್ಲಾಮ್ ಪ್ರಶಸ್ತಿಯನ್ನು ಗೆಲ್ಲುವುದರಿಂದ ವಂಚಿತರಾದರು.

ಸತತ ಎರಡನೇ ಬಾರಿಗೆ ಚಾಂಪಿಯನ್ ಆಗುವ ಮೂಲಕ ಯಾನಿಕ್ ಸಿನ್ನರ್ ಅವರು ಆಸ್ಟ್ರೇಲಿಯನ್ ಓಪನ್ ಇತಿಹಾಸದಲ್ಲಿ ತಮ್ಮ ಪ್ರಶಸ್ತಿಯನ್ನು ಉಳಿಸಿಕೊಂಡ 11 ನೇ ಆಟಗಾರರಾಗಿದ್ದಾರೆ. ಮತ್ತೊಂದೆಡೆ, ಅವರು ಜಿಮ್ ಕೊರಿಯರ್ (1992 ಮತ್ತು 1993) ನಂತರ ಸತತ ಎರಡು ಬಾರಿ ಈ ಪ್ರಶಸ್ತಿಯನ್ನು ಗೆದ್ದ ಅತ್ಯಂತ ಕಿರಿಯ ಆಟಗಾರ ಎಂಬ ಮೈಲಿಗಲ್ಲನ್ನು ನಿರ್ಮಿಸಿದ್ದಾರೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!