ಕೇಜ್ರಿವಾಲ್‌ಗೆ ಮತ್ತೆ ನಿರಾಸೆ: ಮಧ್ಯಂತರ ಜಾಮೀನು ತೀರ್ಪು ಮಂದೂಡಿದ ಸುಪ್ರೀಂ ಕೋರ್ಟ್

ಹೊಸದಿಗಂತ ಡಿಜಿಟಲ್‌ ಡೆಸ್ಕ್‌:  

ದೆಹಲಿ ಅಬಕಾರಿ ನೀತಿ ಹಗರಣದಲ್ಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಸಲ್ಲಿಸಿದ್ದ ಮಧ್ಯಂತರ ಜಾಮೀನು ಅರ್ಜಿ ವಿಚಾರಣೆ ನಡೆಸಿದ ಸುಪ್ರೀಂ ಕೋರ್ಟ್, ತೀರ್ಪು ಮೇ.09ಕ್ಕೆ ಮುಂದೂಡಿದೆ.

ನ್ಯಾ ಸಂಜೀವ್ ಖನ್ನಾ ಪೀಠದಲ್ಲಿ ಕೇಜ್ರಿವಾಲ್ ಮಧ್ಯಮಂತ್ರ ಜಾಮೀನು ಅರ್ಜಿ ವಿಚಾರಣೆ ನಡೆಯಿತು. ನ್ಯಾ. ಸಂಜೀವ್ ಖನ್ನಾ ನೇತೃತ್ವದ ದ್ವಿಸದಸ್ಯ ಪೀಠ, ಲೋಕಸಭಾ ಚುನಾವಣೆ (Lok Sabha Election) ಹಿನ್ನಲೆ ನಾವು ನಿಮ್ಮ ಮಧ್ಯಂತರ ಜಾಮೀನು ಅರ್ಜಿಯನ್ನು ಪರಿಗಣಿಸುತ್ತಿದ್ದೇವೆ. ಚುನಾವಣೆ ಇಲ್ಲಿದ್ದರೆ ನಾವು ಪರಿಗಣಿಸುತ್ತಿರಲಿಲ್ಲ ಎಂದು ಹೇಳಿತು.

ಇಡಿ ಪರ ವಕೀಲರು ವಾದ ಮಂಡಿಸಿದ ಸಾಲಿಸಿಟರ್ ಜನರಲ್ ತುಷಾರ್ ಮೆಹ್ತಾ ಅವರು, ಮುಖ್ಯಮಂತ್ರಿ ಅಥವಾ ಸಾಮಾನ್ಯ ವ್ಯಕ್ತಿ ಕಾನೂನಿನಡಿ ಎಲ್ಲರೂ ಒಂದೆ ಎಂದು ಹೇಳಿದರು. ಜಾಮೀನು ನೀಡಲು ಇಡೀ ತೀವ್ರ ಆಕ್ಷೇಪ ವ್ಯಕ್ತಪಡಿಸಿತು. ಕೇಜ್ರಿವಾಲ್‌ಗೆ 9 ಬಾರಿ ಸಮನ್ಸ್ ನೀಡಲಾಗಿದೆ. ಆದರೆ ಒಂದೇ ಒಂದು ಸಮನ್ಸ್‌ಗೆ ಕೇಜ್ರಿವಾಲ್ ಉತ್ತರಿಸಿಲ್ಲ. ಚುನಾವಣಾ ಪ್ರಚಾರಕ್ಕೆಂದು ಮಧ್ಯಂತರ ಜಾಮೀನು ನೀಡುವುದು ಸರಿಯಲ್ಲ. ಕಾನೂನಿನ ಮುಂದೆ ಜನಸಾಮಾನ್ಯ ಅಥವಾ ಮುಖ್ಯಮಂತ್ರಿ ಇಬ್ಬರೂ ಒಂದೇ ಎಂದು ಇಡಿ ಸುಪ್ರೀಂ ಕೋರ್ಟ್‌ಗೆ ಹೇಳಿದೆ.

ಚುನಾವಣೆಗಳನ್ನು ಉಲ್ಲೇಖಿಸಿ ಕೇಜ್ರಿವಾಲ್ ಜಾಮೀನು ನೀಡಿವುದು ಕೆಟ್ಟ ಸಂಪ್ರದಾಯ. ಒಂದು ವೇಳೆ ನೀಡಿದರೆ ಇತರರು ಇದೇ ರೀತಿಯ ವಿನಾಯಿತಿಗಳನ್ನು ಬಯಸುತ್ತಾರೆ. ಆದಾಗ್ಯೂ ರಾಜಕಾರಣಿಗಳಿಗೆ ಯಾವುದೇ ವಿಶೇಷ ವಿನಾಯಿತಿಯನ್ನು ರಚಿಸುತ್ತಿಲ್ಲ. ಆದರೆ ಸಾರ್ವತ್ರಿಕ ಚುನಾವಣೆಗಳು ಬಾಕಿಯಿದೆ ಎಂಬ ಅಂಶವನ್ನು ಗಣನೆಗೆ ತೆಗೆದುಕೊಂಡು ಆದೇಶವನ್ನು ನೀಡುತ್ತಿದೆ ಎಂದು ನ್ಯಾಯಾಲಯ ಹೇಳಿತು‌.

ಈ ನಡುವೆ ಕೇಜ್ರಿವಾಲ್ ಪರ ವಕೀಲ ಅಭಿಷೇಕ್ ಮನುಸಿಂಘ್ವಿ ಪ್ರಶ್ನಿಸಿದ ಪೀಠ, ಚುನಾವಣೆಗಳ ಹಿನ್ನೆಲೆಯಲ್ಲಿ ನಾವು ಮಧ್ಯಂತರ ಜಾಮೀನು ನೀಡುತ್ತೇವೆ ಎಂದಿಟ್ಟುಕೊಳ್ಳಿ. ನಂತರ ನೀವು ಕಚೇರಿಗೆ ಹಾಜರಾದರೆ ಘರ್ಷಣೆಗೆ ದಾರಿ ಮಾಡಿಕೊಡುತ್ತದೆ. ಸರ್ಕಾರದ ಕೆಲಸದಲ್ಲಿ ಹಸ್ತಕ್ಷೇಪ ಮಾಡಲು ನಾವು ಬಯಸುವುದಿಲ್ಲ. ಮಧ್ಯಂತಜಾಮೀನು ನೀಡಬೇಕೇ ಬೇಡವೇ ಎನ್ನುವುದು ಪರಿಶೀಲಿಸಲಿದ್ದೇವೆ. ಮೇ 9 ಅಥವಾ ಮುಂದಿನ ವಾರ ಮತ್ತೆ ವಿಚಾರಣೆ ನಡೆಸಲಾಗುವುದು ಎಂದು ಕೋರ್ಟ್ ತಿಳಿಸಿ ವಿಚಾರಣೆಯನ್ನು ಮುಂದೂಡಿತು.

ಇತ್ತ ದೆಹಲಿ ರೋಸ್ ಅವನ್ಯೂ ಕೋರ್ಟ್ ಕೇಜ್ರಿವಾಲ್ ನ್ಯಾಯಾಂಗ ಬಂಧನ ಅವಧಿಯನ್ನು ಮೇ.20ರ ವರೆಗೆ ವಿಸ್ತರಿಸಿದೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!