RCB ಫ್ಯಾನ್ಸ್ ಗೆ ಮತ್ತೊಮ್ಮೆ ನಿರಾಸೆ: ಕೊಹ್ಲಿ ಆರಂಭಿಕ ಹಂತದ IPL​ ಆಡುವುದು ಡೌಟ್

ಹೊಸದಿಗಂತ ಡಿಜಿಟಲ್ ಡೆಸ್ಕ್:

ಐಪಿಎಲ್ 17ನೇ ಆವೃತ್ತಿಗೆ ಕ್ಷಣಗಣನೆ ಆರಂಭವಾಗಿದೆ. ಎಲ್ಲಾ ಫ್ರಾಂಚೈಸಿಗಳು ಈಗಾಗಲೇ ಅಭ್ಯಾಸವನ್ನು ಪ್ರಾರಂಭಿಸಿದ್ದಾರೆ. ಚೆನ್ನೈ ಸೂಪರ್ ಕಿಂಗ್ಸ್ ವಿರುದ್ಧ ಮೊದಲ ಪಂದ್ಯ ಆಡಲಿರುವ ಕನ್ನಡಿಗರ ನೆಚ್ಚಿನ ತಂಡ ಆರ್‌ಸಿಬಿ ಕೂಡ ಗುರುವಾರದಿಂದ ಬೆಂಗಳೂರಿನಲ್ಲಿ ತರಬೇತಿ ಶಿಬಿರ ಆರಂಭಿಸಿದೆ. ಆದರೆ ತಂಡದ ಸ್ಟಾರ್ ಆಟಗಾರ ವಿರಾಟ್ ಕೊಹ್ಲಿ ಇನ್ನೂ ತಂಡವನ್ನು ಸೇರಿಕೊಂಡಿಲ್ಲ. ಅವರ ಅನುಪಸ್ಥಿತಿಯಲ್ಲಿ ತಂಡವು ತರಬೇತಿ ಪಡೆಯುತ್ತಿದೆ.

ಬಿಸಿಸಿಐ ಮೂಲಗಳ ಪ್ರಕಾರ ಕೊಹ್ಲಿ ತಂಡ ಸೇರಲು ಇನ್ನೂ ಕೆಲವು ದಿನಗಳು ಬೇಕಾಗುತ್ತದೆ ಎಂದಿದೆ. ಆರ್‌ಸಿಬಿ ತಂಡದ ಎಲ್ಲಾ ಆಟಗಾರರು ತರಬೇತಿಯಲ್ಲಿ ನಿರತರಾಗಿದ್ದಾರೆ. ವೈಯುಕ್ತಿಕ ಕಾರಣಗಳಿಂದ ಕೊಹ್ಲಿ ಸದ್ಯ ಲಂಡನ್ ನಲ್ಲಿ ನೆಲೆಸಿದ್ದಾರೆ ಎನ್ನಲಾಗಿದೆ.

ಕೊಹ್ಲಿ ತಂಡ ಸೇರುವುದು ತಡವಾಗಲಿದೆ ಎಂದು ಬಿಸಿಸಿಐ ಮೂಲಗಳು ಹೇಳುತ್ತಿದ್ದು, ಐಪಿಎಲ್‌ನ ಆರಂಭಿಕ ಹಂತದಲ್ಲಿ ಕೊಹ್ಲಿ ಆಡುವುದು ಅನುಮಾನ ಎಂದು ಹೇಳಲಾಗಿದೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!