ಉತ್ತರಭಾರತದಲ್ಲಿ ಭಾರೀ ಮಳೆಗೆ ಮತ್ತೊಂದು ಅನಾಹುತ, ಮನೆಯ ಛಾವಣಿ ಕುಸಿದು ನಾಲ್ವರು ಸಾವು

ಹೊಸದಿಗಂತ ಡಿಜಿಟಲ್ ಡೆಸ್ಕ್:

ಉತ್ತರಭಾರತದಲ್ಲಿ ಮಳೆಯಿಂದಾಗಿ ಮತ್ತೊಂದು ಅವಘಡ ಸಂಭವಿಸಿದ್ದು, ಸುಖನಿದ್ದೆಯಲ್ಲಿದ್ದ ಕುಟುಂಬದ ಮೇಲೆ ಜವರಾಯ ಚಾವಣಿಯ ರೂಪದಲ್ಲಿ ಎರಗಿದ್ದಾನೆ.

ಬುಲಂದ್‌ಶಹರ್ ಜಿಲ್ಲೆಯ ನರಸೇನಾ ಪೊಲೀಸ್ ಠಾಣಾ ವ್ಯಾಪ್ತಿಯ ಮಾವಾಯಿ ಗ್ರಾಮದಲ್ಲಿ ಮನೆಯ ಮೇಲ್ಛಾವಣಿ ಕುಸಿದು ಒಂದೇ ಕುಟುಂಬದ ನಾಲ್ವರು ಮೃತಪಟ್ಟಿದ್ದಾರೆ.

ಹಳೆಯ ಮನೆಯಾಗಿದ್ದು, ನಿರಂತರ ಮಳೆಯಿಂದಾಗಿ ಶಿಥಿಲಗೊಂಡಿದ್ದು, ನಸುಕಿನ ಜಾವ ಛಾವಣಿ ಕುಸಿದಿದೆ.ತಕ್ಷಣವೇ ನರಸೇನಾ ಪೊಲೀಸರು ಸ್ಥಳಕ್ಕೆ ಧಾವಿಸಿದ್ದು, ಅವಶೇಷಗಳಡಿ ಸಿಲುಕಿದ ಮೃತದೇಹಗಳನ್ನು ಹೊರತೆಗೆದಿದ್ದಾರೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!