ಹೊಸ ದಿಗಂತ ಡಿಜಿಟಲ್ ಡೆಸ್ಕ್:
ಛತ್ತೀಸ್‌ಗಢದ ಬಿಜಾಪುರದಲ್ಲಿ ಭದ್ರತಾ ಪಡೆಗಳೊಂದಿಗೆ ನಡೆದ ಎನ್‌ಕೌಂಟರ್‌ನಲ್ಲಿ ಇಬ್ಬರು ನಕ್ಸಲರು ಸಾವನ್ನಪ್ಪಿದ್ದಾರೆ. ಶಸ್ತ್ರಾಸ್ತ್ರಗಳು ಮತ್ತು ಮದ್ದುಗುಂಡುಗಳನ್ನು ವಶಪಡಿಸಿಕೊಳ್ಳಲಾಗಿದೆ.
ತೆಲಂಗಾಣದ ಗಡಿಯಲ್ಲಿರುವ ಜಿಲ್ಲೆಯ ನೈಋತ್ಯ ಪ್ರದೇಶದ ಅರಣ್ಯದಲ್ಲಿ ಬೆಳಿಗ್ಗೆ ಗುಂಡಿನ ಚಕಮಕಿ ನಡೆದಿದ್ದು, ಭದ್ರತಾ ಸಿಬ್ಬಂದಿಯ ತಂಡ ನಕ್ಸಲ್ ವಿರೋಧಿ ಕಾರ್ಯಾಚರಣೆಗೆ ಹೊರಟಿದ್ದಾಗ ಗುಂಡಿನ ಚಕಮಕಿ ನಡೆದಿದೆ ಬಿಜಾಪುರ ಎಸ್‌ಪಿ ಜಿತೇಂದ್ರ ಯಾದವ್ ಹೇಳಿದ್ದಾರೆ.
ಕಾರ್ಯಾಚರಣೆಯ ಬಳಿಕ ಇಬ್ಬರು ನಕ್ಸಲರ ಮೃತದೇಹಗಳು ಹಾಗೂ 303 ರೈಫಲ್ ಸೇರಿದಂತೆ ಶಸ್ತ್ರಾಸ್ತ್ರಗಳು ಮತ್ತು ಸ್ಫೋಟಕಗಳನ್ನು ಎನ್‌ಕೌಂಟರ್ ಸ್ಥಳದಿಂದ ವಶಪಡಿಸಿಕೊಳ್ಳಲಾಗಿದೆ ಎಂದು ಅವರು ಹೇಳಿದರು. ಗುರುವಾರ, ರಾಜ್ಯದ ಗರಿಯಾಬಂದ್ ಜಿಲ್ಲೆಯಲ್ಲಿ ನಡೆದ ಎನ್‌ಕೌಂಟರ್‌ನಲ್ಲಿ ನಿಷೇಧಿತ ಸಿಪಿಐ (ಮಾವೋವಾದಿ) ಕೇಂದ್ರ ಸಮಿತಿ ಸದಸ್ಯ ಮೋಡೆಮ್ ಬಾಲಕೃಷ್ಣ ಸೇರಿದಂತೆ ಹತ್ತು ನಕ್ಸಲರನ್ನು ಹೊಡೆದುರುಳಿಸಲಾಗಿತ್ತು.