ಹೊಸದಿಗಂತ ಡಿಜಿಟಲ್ ಡೆಸ್ಕ್:
ಜಮ್ಮು-ಕಾಶ್ಮೀರದಲ್ಲಿ ಉಗ್ರರ ಉಪಟಳ ಮುಂದುವರಿದಿದೆ. ಭಯೋತ್ಪಾದಕರು ಮತ್ತು ಭದ್ರತಾ ಪಡೆಗಳ ನಡುವಿನ ಸರಣಿ ಚಕಮಕಿಯಲ್ಲಿ, ದಕ್ಷಿಣ ಕಾಶ್ಮೀರದ ಕುಲ್ಗಾಮ್ ಜಿಲ್ಲೆಯಲ್ಲಿ ಬುಧವಾರ ಮತ್ತೊಂದು ಎನ್‌ಕೌಂಟರ್ ನಡೆದಿದೆ. ಕಳೆದ ಹದಿನೈದು ದಿನಗಳಲ್ಲಿ ನಡೆದ 11 ನೇ ಎನ್‌ಕೌಂಟರ್ ಇದಾಗಿದೆ.
ಜಮ್ಮಕಾಶ್ಮೀರದ 20 ಜಿಲ್ಲೆಗಳ ಪೈಕಿ ಎಂಟು ಜಿಲ್ಲೆಗಳಲ್ಲಿ ಎನ್‌ಕೌಂಟರ್‌ಗಳು ನಡೆದಿದ್ದು,10 ಭಯೋತ್ಪಾದಕರು ಮತ್ತು ಕಮಾಂಡೋ ಕೊಲ್ಲಲ್ಪಟ್ಟಿದ್ದಾರೆ. ಬುಧವಾರ ಕುಲ್ಗಾಮ್‌ನ ಬಡಿಮಾರ್ಗ್, ಯಾರಿಪೋರಾ ಪ್ರದೇಶದಲ್ಲಿ ಶೋಧ ಕಾರ್ಯಾಚರಣೆ ವೇಳೆ ಎನ್‌ಕೌಂಟರ್ ಆರಂಭವಾಗಿದೆ.
ಎರಡೂ ಕಡೆಯಲ್ಲಿ ಯಾವುದೇ ಪ್ರಾಣಹಾನಿಯಾಗಿಲ್ಲ. ಆರ್ಟಿಕಲ್ 370 ರದ್ದತಿಯ ನಂತರ ಜಮ್ಮು ಕಾಶ್ಮೀರದಲ್ಲಿ ಮೊದಲ ಅಸೆಂಬ್ಲಿ ಚುನಾವಣೆಯಲ್ಲಿ ಗೆದ್ದು ಒಮರ್ ಅಬ್ದುಲ್ಲಾ ನೇತೃತ್ವದ ಎನ್‌ಸಿ ಸರ್ಕಾರವು ಅಕ್ಟೋಬರ್ 16 ರಂದು ಪ್ರಮಾಣ ವಚನ ಸ್ವೀಕರಿಸಿದ ನಂತರ ಈ ಎನ್‌ಕೌಂಟರ್‌ಗಳು ಹೆಚ್ಚಾಗಿವೆ.
ಕಳೆದ 15 ದಿನಗಳಲ್ಲಿ ಕಣಿವೆ ರಾಜ್ಯಗಳು ಬಹುತೇಕ ದೈನಂದಿನ ಎನ್‌ಕೌಂಟರ್‌ಗಳಿಗೆ ಸಾಕ್ಷಿಯಾಗಿದೆ, ಕಳೆದ 15 ದಿನಗಳಲ್ಲಿ 11 ಘಟನೆಗಳು ನಡೆದಿವೆ.