ಹೊಸದಿಗಂತ ಡಿಜಿಟಲ್ ಡೆಸ್ಕ್:
ಜಮ್ಮು ಮತ್ತು ಕಾಶ್ಮೀರದ ಕಿಶ್ತ್ವಾರ್ ಜಿಲ್ಲೆಯ ಹದಲ್ ಗಲ್ ಪ್ರದೇಶದಲ್ಲಿ ಭದ್ರತಾ ಪಡೆ ಮತ್ತು ಭಯೋತ್ಪಾದಕರ ನಡುವೆ ಗುಂಡಿನ ಚಕಮಕಿ ನಡೆದಿದೆ.
ನಿರ್ದಿಷ್ಟ ಮಾಹಿತಿಯ ಆಧಾರದ ಮೇಲೆ ಭಾರತೀಯ ಸೇನೆಯು ಕಿಶ್ತ್ವಾರ್ ಸೆಕ್ಟರ್‌ನ ಹದಲ್ ಗಲ್ ಪ್ರದೇಶದಲ್ಲಿ ಕಾರ್ಯಾಚರಣೆಯನ್ನು ಪ್ರಾರಂಭಿಸಿದೆ. ಭಯೋತ್ಪಾದಕರನ್ನು ಹಿಮ್ಮೆಟ್ಟಿಸಲಾಗುತ್ತಿದೆ. ಕಾರ್ಯಾಚರಣೆ ಮುಂದುವರಿದಿದೆ ಎಂದು ಜಮ್ಮು ಮೂಲದ ವೈಟ್ ನೈಟ್ ಕಾರ್ಪ್ಸ್ ಎಕ್ಸ್‌ನಲ್ಲಿ ತಿಳಿಸಿದೆ. ಈ ಬಗ್ಗೆ ಹೆಚ್ಚಿನ ಮಾಹಿತಿ ನಿರೀಕ್ಷಿಲಾಗುತ್ತಿದೆ.
ಭಯೋತ್ಪಾದಕರ ಚಲನವಲನದ ಬಗ್ಗೆ ಮಾಹಿತಿ ಪಡೆದ ಪೊಲೀಸರು, ಭಾರತೀಯ ಸೇನೆಯ ಸಹಾಯದಿಂದ ಡಚ್ಚನ್ ಮತ್ತು ನಾಗಸೇನಿ ನಡುವಿನ ಖಾಂಕೂ ಅರಣ್ಯ ಸುತ್ತುವರಿದು ಶೋಧ ಕಾರ್ಯಾಚರಣೆಯನ್ನು ಆರಂಭಿಸಿದಾಗ ಗುಂಡಿನ ಚಕಮಕಿ ಆರಂಭವಾಯಿತು ಎಂದು ಅಧಿಕಾರಿಗಳು ಮಾಹಿತಿ ನೀಡಿದ್ದಾರೆ.
ಜುಲೈ ಆರಂಭದಲ್ಲಿಯೂ ಕಿಶ್ತ್ವಾರ್‌ನಲ್ಲಿ ಎನ್‌ಕೌಂಟರ್ ನಡೆದಿತ್ತು. ಚತ್ರೂ ಪ್ರದೇಶದಲ್ಲಿ ಸೇನೆ ಮತ್ತು ಭಯೋತ್ಪಾದಕರ ನಡುವೆ ಈ ಗುಂಡಿನ ಚಕಮಕಿ ಆರಂಭವಾಗಿತ್ತು. ಪರ್ವತ ಪ್ರದೇಶದಲ್ಲಿ ಅಡಗಿರುವ ಭಯೋತ್ಪಾದಕರನ್ನು ಪತ್ತೆಹಚ್ಚಲು ಸೇನೆ ಮತ್ತು ಜಮ್ಮು ಮತ್ತು ಕಾಶ್ಮೀರ ಪೊಲೀಸರ ಜಂಟಿ ತಂಡ ಕಾರ್ಯಾಚರಣೆ ಆರಂಭಿಸಿದ ನಂತರ ಈ ಗುಂಡಿನ ಚಕಮಕಿ ಆರಂಭವಾಗಿತ್ತು.