ಉತ್ತರ ಪ್ರದೇಶದಲ್ಲಿ ಮತ್ತೊಂದು ಎನ್‌ಕೌಂಟರ್‌: ಗ್ಯಾಂಗ್​​ಸ್ಟರ್ ಅನಿಲ್ ದುಜಾನಾ ಹತ್ಯೆ!

ಹೊಸದಿಗಂತ ಡಿಜಿಟಲ್‌ ಡೆಸ್ಕ್:‌ 

ಉತ್ತರ ಪ್ರದೇಶದ ಮೀರತ್ ಜಿಲ್ಲೆಯಲ್ಲಿ ಗುರುವಾರ ಮಧ್ಯಾಹ್ನ ಉತ್ತರ ಪ್ರದೇಶದ ವಿಶೇಷ ಕಾರ್ಯಪಡೆ (STF) ಗ್ಯಾಂಗ್​​ಸ್ಟರ್​​ ಅನಿಲ್ ದುಜಾನಾನನ್ನು (Gangster Anil Dujana) ಎನ್‌ಕೌಂಟರ್‌ನಲ್ಲಿ ಹತ್ಯೆ ಮಾಡಿದೆ.

ಗ್ಯಾಂಗ್‌ಸ್ಟರ್ ಅನಿಲ್ ದುಜಾನಾ ಗೌತಮ್ ಬುದ್ಧ ನಗರ ಜಿಲ್ಲೆಯ ಬಾದಲ್‌ಪುರ ಪೊಲೀಸ್ ಠಾಣೆ ವ್ಯಾಪ್ತಿಯ ದುಜಾನಾ ಗ್ರಾಮದ ನಿವಾಸಿ. ಸಂಘಟಿತ ಕ್ರಿಮಿನಲ್ ಗ್ಯಾಂಗ್ ಅನ್ನು ನಡೆಸುತ್ತಿದ್ದನು. ಈತನ ವಿರುದ್ಧ 18 ಕೊಲೆಗಳು, ಸುಲಿಗೆ, ದರೋಡೆ, ಭೂಹಗರಣ, ಉಚ್ಚಾಟನೆ ಸೇರಿದಂತೆ 62 ಕ್ರಿಮಿನಲ್ ಪ್ರಕರಣಗಳು ದಾಖಲಾಗಿವೆ.

ಉತ್ತರ ಪ್ರದೇಶದಲ್ಲಿ ಮಾಫಿಯಾ ಮತ್ತು ಗ್ಯಾಂಗ್​​ಸ್ಟರ್​​ಗಳ ವಿರುದ್ಧದ ಕಾರ್ಯಾಚರಣೆಯ ಹಿನ್ನೆಲೆಯಲ್ಲಿ ಅನಿಲ್ ದುಜಾನಾ ಎನ್‌ಕೌಂಟರ್ ನಡೆದಿದೆ.

ಡಿಸೆಂಬರ್ 2022 ರಲ್ಲಿ, ಅನಿಲ್ ದುಜಾನಾ ಅವರನ್ನು ದೆಹಲಿ ಪೊಲೀಸರು ಮಯೂರ್ ವಿಹಾರ್ ಪ್ರದೇಶದಿಂದ ಬಂಧಿಸಿದರು. ದುಜಾನಾ ಅವರ ತಲೆಗೆ 50,000 ರೂ ಬಹುಮಾನ ಘೋಷಿಸಿದ್ದು ಈತ ಉತ್ತರ ಪ್ರದೇಶದ ಮೋಸ್ಟ್ ವಾಂಟೆಡ್ ಕ್ರಿಮಿನಲ್‌ಗಳ ಪಟ್ಟಿಯಲ್ಲಿದ್ದನು.

ರಾಷ್ಟ್ರೀಯ ಭದ್ರತಾ ಕಾಯಿದೆ (ಎನ್‌ಎಸ್‌ಎ), ಗೂಂಡಾ ಕಾಯಿದೆ ಸೇರಿದಂತೆ ಹಲವು ಆರೋಪಗಳಲ್ಲಿ ಆತನ ವಿರುದ್ಧ ಪ್ರಕರಣ ದಾಖಲಾಗಿತ್ತು. ಹಲವು ಪ್ರಕರಣಗಳಲ್ಲಿ ಹಾಜರಾಗದ ಕಾರಣ ನ್ಯಾಯಾಲಯ ಅವರ ವಿರುದ್ಧ ಜಾಮೀನು ರಹಿತ ವಾರಂಟ್ ಜಾರಿ ಮಾಡಿತ್ತು. ದುಜಾನಾಗೆ ಬಾದಲ್ಪುರ ನ್ಯಾಯಾಲಯ 3 ವರ್ಷಗಳ ಜೈಲು ಶಿಕ್ಷೆ ವಿಧಿಸಿದೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!