ಹೊಸದಿಗಂತ ಡಿಜಿಟಲ್ ಡೆಸ್ಕ್:
ವಾಯುವ್ಯ ದೆಹಲಿಯ ಪ್ರಶಾಂತ್ ವಿಹಾರ್ ಪ್ರದೇಶದ ಪಿವಿಆರ್ ಸಿನಿಮಾ ಹಾಲ್ ಬಳಿ ಸ್ಫೋಟ ಸಂಭವಿಸಿದೆ.
ಇಂದು ಬೆಳಗ್ಗೆ 11:48ರ ಸುಮಾರಿಗೆ ಸ್ಫೋಟದ ಸದ್ದು ಕೇಳಿಸಿದೆ. ಪೊಲೀಸರು ಮತ್ತು ಅಗ್ನಿಶಾಮಕ ವಾಹನಗಳು ಘಟನಾ ಸ್ಥಳಕ್ಕೆ ಧಾವಿಸಿದ್ದು, ದೆಹಲಿ ಪೊಲೀಸ್ ವಿಶೇಷ ದಳದ ತಂಡವು ತೆರಳುತ್ತಿದೆ.
ಪ್ರಶಾಂತ್ ವಿಹಾರ್‌ನ ಸಿಆರ್‌ಪಿಎಫ್ ಶಾಲೆಯ ಬಳಿ ಸ್ಫೋಟ ಸಂಭವಿಸಿದ ಒಂದು ತಿಂಗಳ ನಂತರ ಮತ್ತೊಂದು ಘಟನೆ ನಡೆದಿದೆ. ಸ್ಫೋಟದಲ್ಲಿ ಶಾಲೆಯ ಗೋಡೆಗೆ ಹಾನಿಯಾಗಿದೆ. ಆದರೆ ಯಾವುದೇ ಪ್ರಾಣಹಾನಿ ಸಂಭವಿಸಿಲ್ಲ.
ಘಟನೆಯ ಬಗ್ಗೆ ಹೆಚ್ಚಿನ ಮಾಹಿತಿ ನಿರೀಕ್ಷಿಸಲಾಗಿದೆ.