Thursday, November 13, 2025

ರಾಷ್ಟ್ರ ರಾಜಧಾನಿಯಲ್ಲಿ ಮತ್ತೊಂದು ಸ್ಫೋಟ? ಬೆಚ್ಚಿ ಬಿದ್ದ ಜನತೆ! ನಡೆದಿದ್ದೇನು?

ಹೊಸದಿಗಂತ ಡಿಜಿಟಲ್‌ ಡೆಸ್ಕ್‌:

ಐತಿಹಾಸಿಕ ಕೆಂಪುಕೋಟೆ ಬಳಿಯ ಕಾರು ಸ್ಫೋಟ ಘಟನೆಯಿಂದ ರಾಷ್ಟ್ರ ರಾಜಧಾನಿ ಜನರಲ್ಲಿ ಭೀತಿ ಆವರಿಸಿದ್ದು, ಪ್ರತಿದಿನ ಭಯದಲ್ಲಿಯೇ ಬದುಕು ಸಾಗಿಸುವಂತಾಗಿದೆ.

ಈ ಮಧ್ಯೆ ಗುರುವಾರ ಬೆಳಿಗ್ಗೆ ನೈಋತ್ಯ ದೆಹಲಿಯ ಮಹಿಪಾಲ್‌ಪುರ ಪ್ರದೇಶದಲ್ಲಿ ಬಸ್‌ ಟೈರ್ ಸ್ಫೋಟದಿಂದ ಉಂಟಾದ ಪ್ರಬಲ ಶಬ್ದಕ್ಕೆ ಜನತೆ ಬೆಚ್ಚಿ ಬಿದ್ದಿದ್ದಾರೆ. ಮಹಿಪಾಲ್‌ಪುರದ ರಾಡಿಸನ್ ಹೋಟೆಲ್ ಬಳಿ ಬೆಳಿಗ್ಗೆ 9.19 ಕ್ಕೆ ಸ್ಫೋಟದಂತಹ ದೊಡ್ಡ ಶಬ್ದ ಕೇಳಿಬಂದಿದೆ.

ತದ ನಂತರ ದೆಹಲಿ ಅಗ್ನಿಶಾಮಕ ಸಿಬ್ಬಂದಿಗೆ ಕರೆ ಮಾಡಿ ತಿಳಿಸಲಾಗಿದ್ದು, ಮೂರು ವಾಹನಗಳಲ್ಲಿ ಸ್ಥಳಕ್ಕೆ ದೌಡಾಯಿಸಿದ ಅಗ್ನಿಶಾಮಕ ಸಿಬ್ಬಂದಿ ಪರಿಶೀಲನೆ ನಡೆಸಿದ್ದಾರೆ. ಆದರೆ ಸ್ಥಳದಲ್ಲಿ ಏನೂ ಸಿಗಲಿಲ್ಲ. ಕರೆ ಮಾಡಿದವರನ್ನು ಸಂಪರ್ಕಿಸಿ ಮಾಹಿತಿ ಪಡೆಯಲಾಗಿದೆ ಎಂದು ಉಪ ಪೊಲೀಸ್ ಆಯುಕ್ತ (ನೈಋತ್ಯ) ಅಮಿತ್ ಗೋಯಲ್ ಎಂದು ಹೇಳಿದರು.

error: Content is protected !!