Sunday, February 5, 2023

Latest Posts

SHOCKING | ರಜೌರಿ ಉಗ್ರ ದಾಳಿ ನಡೆದ ಮನೆ ಬಳಿಯಲ್ಲೇ ಮತ್ತೊಂದು ಸ್ಫೋಟ

ಹೊಸದಿಗಂತ ಡಿಜಿಟಲ್ ಡೆಸ್ಕ್:

ಜಮ್ಮು ಮತ್ತು ಕಾಶ್ಮೀರದ ರಜೌರಿಯಲ್ಲಿ ಉಗ್ರರು ಮನೆಗಳ ಮೇಲೆ ದಾಳಿ ನಡೆಸಿ ನಾಲ್ವರು ಮೃತಪಟ್ಟಿದ್ದರು. ಇದೀಗ ಈ ಮನೆಯ ಬಳಿ ಇರುವ ಇನ್ನೊಂದು ಮನೆಯಲ್ಲಿ ಸ್ಫೋಟ ಸಂಭವಿಸಿದ್ದು, ಮಗು ಮೃತಪಟ್ಟಿದೆ. ಐವರು ಗಂಭೀರವಾಗಿ ಗಾಯಗೊಂಡಿದ್ದಾರೆ.

ಡ್ಯಾಂಗ್ರಿ ಗ್ರಾಮದಲ್ಲಿ ನಿನ್ನೆ ಗುಂಡಿನ ದಾಳಿ ನಡೆದ ಮನೆಗಳ ಸಮೀಪದಲ್ಲೇ ಈ ದಾಳಿ ನಡೆದಿದ್ದು, ಮಗು ಮೃತಪಟ್ಟಿದೆ. ಗಾಯಗೊಂಡವರಲ್ಲಿ ಇನ್ನೊಂದು ಮಗುವಿನ ಸ್ಥಿತಿ ಚಿಂತಾಜನಕವಾಗಿದೆ.

ಭದ್ರತಾ ಪಡೆಗಳು ಉಗ್ರರಿಗಾಗಿ ಹುಡುಕಾಟ ನಡೆಸುತ್ತಿದ್ದು, ಇನ್ನೊಂದು ಶಂಕಿತ ಸುಧಾರಿತ ಸ್ಫೋಟಕ ಸಾಧನವನ್ನು ಪತ್ತೆ ಮಾಡಿದ್ದಾರೆ.

ಈ ಸುದ್ದಿ ಇತರರೊಂದಿಗೂ ಹಂಚಿಕೊಳ್ಳಿ

Latest Posts

Don't Miss

error: Content is protected !!