ಒಲಂಪಿಕ್‌ ಚಿನ್ನದ ವೀರನಿಂದ ಮತ್ತೊಂದು ಸಾಧನೆ

ಹೊಸದಿಗಂತ ಡಿಜಿಟಲ್‌ ಡೆಸ್ಕ್:
ಟೋಕಿಯೋ ಒಲಂಪಿಕ್ಸ್ ನಲ್ಲಿ ಚಿನ್ನದ ಪದೆಕ ಗೆಲ್ಲುವ ಮೂಲಕ ದಾಖಲೆ ಬರೆದಿದ್ದ ನೀರಜ್‌ ಛೋಪ್ರಾ ಇದೀಗ ಮತ್ತೊಂದು ಪದಕ ಗೆಲ್ಲುವ ಮೂಲಕ ಸಾಧನೆ ಮಾಡಿದ್ದಾರೆ. ಒಲಿಂಪಿಕ್ ಗೇಮ್ಸ್‌ನಲ್ಲಿ ಟ್ರ್ಯಾಕ್ ಮತ್ತು ಫೀಲ್ಡ್ ಚಿನ್ನದ ಪದಕ ಗೆದ್ದ ಮೊದಲ ಭಾರತೀಯ ಎಂಬ ಹೆಗ್ಗಳಿಕೆಗೆ ಪಾತ್ರವಾದ ನೀರಜ್‌ ಛೋಪ್ರಾ ಭಾನುವಾರ ಯುಜೀನ್‌ನಲ್ಲಿ ನಡೆದ ಪ್ರತಿಷ್ಠಿತ ವಿಶ್ವ ಅಥ್ಲೆಟಿಕ್ಸ್ ಚಾಂಪಿಯನ್‌ಶಿಪ್‌ನಲ್ಲಿ ಪುರುಷರ ಜಾವೆಲಿನ್ ಥ್ರೋ ಫೈನಲ್‌ನಲ್ಲಿ ಬೆಳ್ಳಿ ಪದಕವನ್ನು ಪಡೆಯುವ ಮೂಲಕ ವಿಶ್ವ ಅಥ್ಲೆಟಿಕ್ಸ್ ಚಾಂಪಿಯನ್‌ಶಿಪ್‌ನಲ್ಲಿ ಪದಕ ಗೆದ್ದ 2 ನೇ ಭಾರತೀಯ ಎಂಬ ಹೆಗ್ಗಳಿಕೆಗೆ ಪಾತ್ರರಾಗಿದ್ದಾರೆ.

ನೀರಜ್ ತಮ್ಮ ನಾಲ್ಕನೇ ಪ್ರಯತ್ನದ ಎಸೆತದಲ್ಲಿ 88.13 ಮೀಟರ್ ದೂರವನ್ನು ದಾಖಲಿಸಿ ಎರಡನೇ ಸ್ಥಾನ ಪಡೆದಿದ್ದಾರೆ. ಅವರ ಮೊದಲ ಎಸೆತ ಫೌಲ್‌ ಆದರೂ ನಂತರದ ಎಸತೆಗಳಲ್ಲಿ ಕ್ರಮವಾಗಿ 82.39 ಮೀ ಮತ್ತು 86.37 ಮೀ. ಅಂತಿಮವಾಗಿ ನಾಲ್ಕನೇ ಪ್ರಯತ್ನದಲ್ಲಿ ಅವರು 88.13 ಮೀ ದೂರವನ್ನು ದಾಖಲಿಸುವ ಮೂಲಕ ಎರಡನೇ ಸ್ಥಾನ ಪಡೆದು ಬೆಳ್ಳಿ ಪದಕವನ್ನು ತಮ್ಮದಾಗಿಸಿಕೊಂಡಿದ್ದಾರೆ.

 

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!