ವಿದ್ಯಾಕಾಶಿ ಸಂಗೀತ ಕ್ಷೇತ್ರಕ್ಕೆ ಮತ್ತೊಂದು ಗರಿ: ಪ್ರೊ.ವೆಂಕಟೇಶಕುಮಾರ್‌ಗೆ ಕಾಳಿದಾಸ ಸಮ್ಮಾನ್

ಹೊಸದಿಗಂತ ವರದಿ, ಧಾರವಾಡ:

ನಗರದ ಹೆಸರಾಂತ ಹಿಂದೂಸ್ತಾನಿ ಶಾಸ್ತ್ರೀಯ ಸಂಗೀತಗಾರ ಪದ್ಮಶ್ರೀ ಪ್ರೊ. ಎಂ. ವೆಂಕಟೇಶಕುಮಾರ್ ಅವರು ಮಧ್ಯಪ್ರದೇಶ ಸರ್ಕಾರ ನೀಡುವ ಪ್ರತಿಷ್ಠಿತ ಕಾಳಿದಾಸ ಸಮ್ಮಾನ್ ಪ್ರಶಸ್ತಿಗೆ ಭಾಜನರಾಗಿದ್ದು, 2017ನೇ ಸಾಲಿನ ಪುರಸ್ಕಾರ ಕಳೆದ ಡಿಸೆಂಬರ್‌ನಲ್ಲಿ ಪ್ರಕಟವಾಗಿದೆ.
ಹಿಂದೂಸ್ತಾನಿ ಸಂಗೀತ ಕ್ಷೇತ್ರಕ್ಕೆ ಅವರು ನೀಡಿದ ಕೊಡುಗೆ, ಸಾಧನೆಗಳನ್ನು ಆಧರಿಸಿ ಈ ಪ್ರಶಸ್ತಿ ನೀಡಲಾಗಿದೆ ಎಂದು ಮಧ್ಯಪ್ರದೇಶ ಸರ್ಕಾರದ ಸಂಸ್ಕೃತಿ ಸಂಚಾಲನಾಯದ ಸಂಚಾಲಕ ಆದಿತಿಕುಮಾರ್ ತ್ರಿಪಾಠಿ ತಿಳಿಸಿದ್ದು, ಪ್ರಶಸ್ತಿ ರೂ.2 ಲಕ್ಷ ನಗದು, ಸ್ಮರಣಿಕೆಯನ್ನು ಒಳಗೊಂಡಿದೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!