ಮೋದಿ ತವರಿನ ಮುಡಿಗೆ ಮತ್ತೊಂದು ಗರಿ: ವಿಶ್ವದ ಅತಿದೊಡ್ಡ ಕಾರ್ಪೊರೇಟ್ ಕಚೇರಿ ಲೋಕಾರ್ಪಣೆ

ಹೊಸದಿಗಂತ ಡಿಜಿಟಲ್ ಡೆಸ್ಕ್:
ವಿಶ್ವದ ಅತಿದೊಡ್ಡ ಕಾರ್ಪೊರೇಟ್ ಕಚೇರಿ ಕೇಂದ್ರವಾದ ‘ಸೂರತ್ ಡೈಮಂಡ್ ಬೋರ್ಸ್’ ಲೋಕಾರ್ಪಣೆಗೊಂಡಿದೆ.
ಅಮೆರಿಕದ ಪ್ರತಿಷ್ಟಿತ ಪೆಂಟಗನ್ ಮೀರಿಸುವ ಈ ಹೊಸ ಕಚೇರಿ ಸಂಕೀರ್ಣವನ್ನು ಪ್ರಧಾನಿ ನರೇಂದ್ರ ಮೋದಿ ಖುದ್ದು ಉದ್ಘಾಟಿಸಿ ಶುಭಹಾರೈಸಿದ್ದಾರೆ. ಈ ಮೂಲಕ ತನ್ನದೇ ತವರು ಗುಜರಾತ್‌ನ ಸೂರತ್ ನಗರವು ವಜ್ರದ ರಾಜಧಾನಿಯಾಗುವತ್ತ ಭವಿಷ್ಯ ಬರೆದಿದ್ದಾರೆ.
ಡೈಮಂಡ್ ಬೋರ್ಸ್: ಹೀಗಿದೆ ವಿಶೇಷತೆ…
ಬರೋಬ್ಬರಿ 35.54 ಎಕರೆ ಭೂಪ್ರದೇಶ.
3,400 ಕೋಟಿ ರೂ. ವೆಚ್ಚದಲ್ಲಿ ನಿರ್ಮಾಣ
4,500ಕ್ಕೂ ಹೆಚ್ಚು ನೆಟ್‌ವರ್ಕ್ ಕಚೇರಿ
65,000ಕ್ಕೂ ಹೆಚ್ಚು ವಜ್ರದ ವ್ಯಾಪಾರಿಗಳಿಗೆ ಒನ್‌ಸ್ಟಾಪ್ ಡೆಸ್ಟಿನೇಶನ್
ಪಾರ್ಕಿಂಗ್‌ಗೆ 20 ಲಕ್ಷ ಚದರ ಅಡಿ ವಿಸ್ತೀರ್ಣ ಪ್ರದೇಶ
ಚಿಲ್ಲರೆ ಆಭರಣ ವ್ಯಾಪಾರಕ್ಕಾಗಿ ಆಭರಣ ಮಳಿಗೆ, ಅಂತರರಾಷ್ಟ್ರೀಯ ಬ್ಯಾಂಕಿಂಗ್, ಸುರಕ್ಷಿತ ವಾಲ್ಟ್ಸ್‌ಗಳ ಸೌಲಭ್ಯ

 

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!