March 6, 2026
Friday, March 6, 2026
spot_img

ಬೆಂಗಳೂರಿಗೆ ಮತ್ತೊಂದು ಗರಿ, 2ನೇ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ ನಿರ್ಮಾಣ

ಹೊಸದಿಗಂತ ಡಿಜಿಟಲ್‌ ಡೆಸ್ಕ್‌:

2026-27ನೇ ಸಾಲಿನ ಬಜೆಟ್‌ನ್ನು ಸಿಎಂ ಸಿದ್ದರಾಮಯ್ಯ ಮಂಡಿಸುತ್ತಿದ್ದು, ಬೆಂಗಳೂರಿಗೆ ಮಹತ್ವದ ಘೋಷಣೆಯೊಂದನ್ನು ಮಾಡಿದ್ದಾರೆ.

ಬೆಂಗಳೂರಿನಲ್ಲಿ ಈಗಾಗಲೇ ಇರುವ ಏರ್‌ಪೋರ್ಟ್‌ನ್ನು ಇಡೀ ವಿಶ್ವವೇ ಗಮನಿಸಿ ವ್ಹಾವ್‌ ಎಂದಿದೆ. ಇಂಥದ್ದೇ ಇನ್ನೊಂದು ಸುಂದರ ಏರ್‌ಪೋರ್ಟ್‌ಗೆ ಬೆಂಗಳೂರು ಸಜ್ಜಾಗಿದೆ.

ಬೆಂಗಳೂರಿನಲ್ಲಿ 2ನೇ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ ನಿರ್ಮಾಣ ಮಾಡಲಾಗುವುದು ಎಂದು ಸಿಎಂ ಘೋಷಣೆ ಮಾಡಿದ್ದಾರೆ.
ಜತೆಗೆ AAI ಭಾರತೀಯ ವಿಮಾನ ನಿಲ್ದಾಣ ಪ್ರಾಧಿಕಾರ ಅಭಿಪ್ರಾಯ ಪಡೆಯಲಾಗುವುದು, 2ನೇ ಅಂತರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಕಾರ್ಯ ಸಾಧ್ಯತಾ ವರದಿ ಸಲ್ಲಿಸಲಾಗುವುದು ಎಂದಿದ್ದಾರೆ.

7 ದೇಶಿಯ ವಿಮಾನ ನಿಲ್ದಾಣ ಅಭಿವೃದ್ಧಿಗಾಗಿ 1,593 ಕೋಟಿ ರೂ. ಮೀಸಲಿಡಲಾಗುವುದು. ಏರ್​ಪೋರ್ಟ್​ಗಳ ಅಭಿವೃದ್ಧಿಗೆ ಈ ವರ್ಷ 200 ಕೋಟಿ ರೂ. ಅನುದಾನ,ವಿಜಯಪುರ, ಶಿವಮೊಗ್ಗದಲ್ಲಿ ಫ್ಲೈಟ್ ಟ್ರೈನಿಂಗ್ ಸ್ಕೂಲ್ ನಿರ್ಮಾಣ ಮಾಡಲಾಗುವುದು ಎಂದು ಸಿದ್ದರಾಮಯ್ಯ ಘೋಷಿಸಿದ್ದಾರೆ.

Must Read

error: Copy ಬೇಡ, Coffee ಜೊತೆ ಹಂಚಿಕೊಳ್ಳಿ !