ಹೊಸದಿಗಂತ ಡಿಜಿಟಲ್ ಡೆಸ್ಕ್:
ಉತ್ತರ ಪ್ರದೇಶದ ಮೂಲಸೌಕರ್ಯ ಕ್ಷೇತ್ರದಲ್ಲಿ ಇಂದು ಹೊಸ ಇತಿಹಾಸ ಸೃಷ್ಟಿಯಾಗಿದೆ. ಜೇವಾರ್‌ನಲ್ಲಿ ಅದ್ದೂರಿಯಾಗಿ ನಿರ್ಮಾಣಗೊಂಡಿರುವ ‘ನೋಯ್ಡಾ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ’ವನ್ನು ಪ್ರಧಾನಿ ನರೇಂದ್ರ ಮೋದಿ ಅವರು ಇಂದು ಉದ್ಘಾಟಿಸಿದರು.

ಸುಮಾರು 11,200 ಕೋಟಿ ರೂಪಾಯಿಗಳ ಬೃಹತ್ ವೆಚ್ಚದಲ್ಲಿ, ಸಾರ್ವಜನಿಕ-ಖಾಸಗಿ ಸಹಭಾಗಿತ್ವದಡಿ ಈ ವಿಮಾನ ನಿಲ್ದಾಣವನ್ನು ನಿರ್ಮಿಸಲಾಗಿದೆ. ಈ ಮೂಲಕ ಉತ್ತರ ಪ್ರದೇಶವು 5 ಅಂತಾರಾಷ್ಟ್ರೀಯ ವಿಮಾನ ನಿಲ್ದಾಣಗಳನ್ನು ಹೊಂದಿರುವ ದೇಶದ ಮೊದಲ ರಾಜ್ಯ ಎಂಬ ಹೆಗ್ಗಳಿಕೆಗೆ ಪಾತ್ರವಾಗಿದೆ.
ಈ ಹೊಸ ಏರ್‌ಪೋರ್ಟ್ ಕೇವಲ ಪ್ರಯಾಣಿಕರಿಗೆ ಸುಧಾರಿತ ಸೌಲಭ್ಯಗಳನ್ನು ನೀಡುವುದು ಮಾತ್ರವಲ್ಲದೆ, ಈ ಭಾಗದಲ್ಲಿ ಸಾವಿರಾರು ಉದ್ಯೋಗಾವಕಾಶಗಳನ್ನು ಸೃಷ್ಟಿಸುವ ಮೂಲಕ ರಾಜ್ಯದ ಆರ್ಥಿಕ ಪ್ರಗತಿಗೆ ದೊಡ್ಡ ವೇಗ ನೀಡುವ ನಿರೀಕ್ಷೆಯಿದೆ.



