September 23, 2026
Wednesday, September 23, 2026
spot_img

ಮೈಸೂರು-ಕೊಡಗು ಕ್ಷೇತ್ರದ ಮಾಜಿ ಸಂಸದ ಪ್ರತಾಪ್ ಸಿಂಹ ವಿರುದ್ಧ ಮತ್ತೊಂದು ಎಫ್‌ಐಆರ್

ಹೊಸದಿಗಂತ ಡಿಜಿಟಲ್‌ ಡೆಸ್ಕ್‌:

ಮೈಸೂರು-ಕೊಡಗು ಕ್ಷೇತ್ರದ ಮಾಜಿ ಸಂಸದ ಪ್ರತಾಪ್‌ ಸಿಂಹ ವಿರುದ್ಧ ಮತ್ತೊಂದು ಎಫ್‌ಐಆರ್‌ ದಾಖಲಾಗಿದೆ. ಟಿ. ನರಸೀಪುರದಲ್ಲಿ ಅಂಬೇಡ್ಕರ್‌ ವೆಲ್‌ಫೇರ್‌ ಅಸೋಸಿಯೇಷನ್‌ ಅಧ್ಯಕ್ಷರಾದ ಮಧು ಎನ್ನುವವರು ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ.

ಪ್ರತಾಪ್‌ ಸಿಂಹ ಅವರು ಇನ್ಸ್‌ಪೆಕ್ಟರ್‌ ಧನಂಜಯ ಬಗ್ಗೆ ಜಾತಿ ಸಂಬಂಧಿತ ಅವಹೇಳನಾಕಾರಿ ಹೇಳಿಕೆಗಳನ್ನು ನೀಡಿದ್ದಾರೆ ಜೊತೆಗೆ ಬೆದರಿಕೆ ಹಾಕಿದ್ದಾರೆ ಎಂದು ಆರೋಪ ಮಾಡಿದ್ದಾರೆ. ಗಣಪತಿ ವಿಸರ್ಜನೆ ಕಾರ್ಯಕ್ರಮದಲ್ಲಿ ನೂರಾರು ಜನರ ಮುಂದೆ, ಕ್ಯಾಮರಾ ಸಮ್ಮುಖದಲ್ಲಿ ಮೈಕ್‌ ಮುಂದೆ ಕೆಟ್ಟದಾಗಿ ಮಾತನಾಡಿದ್ದಾರೆ. ಅವರ ಭಾಷಣ ಅವಹೇಳನಾಕಾರಿಯಾಗಿತ್ತು ಎಂದು ದೂರಿದ್ದಾರೆ.

ಭಾಷಣದ ವೇಳೆ ದಲಿತ ಸಮುದಾಯದ ಕಾರ್ಯಕರ್ತರನ್ನು ಉದ್ದೇಶಿಸಿ ಮಾತನಾಡುವಾಗ, ನೀವು ಬರೀ ನೀಲಿ ಶಾಲು ಹೊದ್ದು ನಿಂತರೆ ಆಗುವುದಿಲ್ಲ. ನಿಮಗೆ ಅಂಬೇಡ್ಕರ್‌ ಬಗ್ಗೆ ಏನೂ ಗೊತ್ತಿಲ್ಲ. ಮೊದಲು ಅವರ ಬಗ್ಗೆ ತಿಳಿದುಕೊಂಡು ಬನ್ನಿ ಎಂದು ಹೇಳಿದ್ದಾರೆ ಎನ್ನಲಾಗಿದೆ. ಈ ಮೂಲಕ ಇಡೀ ದಲಿತ ಸಮುದಾಯದ ಸಾಂಸ್ಕೃತಿಕ ಅಸ್ಮಿತೆಯಾದ ನೀಲಿ ಶಾಲಿನ ಗೌರವವನ್ನು ಹಾಗೂ ದೇಶದ ಸಂವಿಧಾನ ಶಿಲ್ಪಿ ಗೌರವಾನ್ವಿತ ಡಾ. ಬಿ.ಆರ್. ಅಂಬೇಡ್ಕರ್ ಅವರ ವಿಚಾರಗಳನ್ನು ಸಾರ್ವಜನಿಕವಾಗಿ ಹೀಯಾಳಿಸಿರುತ್ತಾರೆ. ಇದು ನಮ್ಮ ಸಂವಿಧಾನದ ವಿಧಿ 21ರ ಅಡಿಯಲ್ಲಿ ದೊರೆತಿರುವ ಗೌರವದಿಂದ ಬದುಕುವ ಮೂಲಭೂತ ಹಕ್ಕಿನ ಮತ್ತು ಪರಿಶಿಷ್ಟ ಜಾತಿಯ ಆತ್ಮಗೌರವಕ್ಕೆ ಎಸಗಿದ ಘೋರ ಉಲ್ಲಂಘನೆಯಾಗಿದೆ ಎಂದು ಎಫ್‌ಐಆರ್‌ ನಲ್ಲಿ ಉಲ್ಲೇಖಿಸಿದ್ದಾರೆ.

Must Read

error: Copy ಬೇಡ, Coffee ಜೊತೆ ಹಂಚಿಕೊಳ್ಳಿ !