ಹೊಸ ದಿಗಂತ ಡಿಜಿಟಲ್ ಡೆಸ್ಕ್:
ಬೆಂಗಳೂರಿನ ಜೆಸಿ ರಸ್ತೆಯಲ್ಲಿನ ವೆಂಕಟೇಶ್ವರ ಟೈರ್ ಅಂಗಡಿಯಲ್ಲಿ ಭೀಕರ ಅಗ್ನಿ ಅವಘಡ ಸಂಭವಿಸಿದೆ. ಟೈರ್ ಅಂಗಡಿಯೊಂದರಲ್ಲಿ ಕಾಣಿಸಿಕೊಂಡ ಬೆಂಕಿಯಿಂದಾಗಿ ಧಗಧಗಿಸಿ ಹೊತ್ತಿ ಉರಿಯುತ್ತಿದೆ. ಬೆಂಕಿಯನ್ನು ನಂದಿಸಲು ಅಗ್ನಿಶಾಮಕ ಸಿಬ್ಬಂದಿ ಹರಸಾಹಸ ಪಡುತ್ತಿದ್ದಾರೆ.
ಅಂಗಡಿಯನ್ನು ಬಾಗಿಲು ಹಾಕಿ ಹೋಗಿದ್ದಾಗ ಶಾರ್ಟ್ ಸರ್ಕ್ಯೂಟ್ ನಿಂದ ಬೆಂಕಿ ಹೊತ್ತಿಕೊಂಡಿದೆ ಎನ್ನಲಾಗುತ್ತಿದೆ. ಅಂಗಡಿಯ ಮುಂದಿದ್ದಂತ ಎರಡು ವಾಹನಗಳು ಕೂಡ ಸುಟ್ಟು ಭಸ್ಮವಾಗಿದ್ದಾರೆ. ಬೆಂಕಿಯನ್ನು ನಂದಿಸಲು ಎರಡು ಅಗ್ನಿಶಾಮಕ ವಾಹನಗಳು ಸ್ಥಳದಲ್ಲಿ ಹರಸಾಹಸ ಪಡುತ್ತಿದ್ದಾರೆ.