ಹೊಸದಿಗಂತ ಡಿಜಿಟಲ್ ಡೆಸ್ಕ್:
ದಕ್ಷಿಣ ಭಾರತದ ಪ್ರಸಿದ್ಧ ಯಾತ್ರಾ ಸ್ಥಳವಾದ ಶಬರಿಮಲೆ ಕ್ಷೇತ್ರದಲ್ಲಿ ಮಂಡಲ ಪೂಜೆಗೆ ದಿನಗಣನೆ ಆರಂಭವಾಗಿರುವ ಬೆನ್ನಿಗೇ ಮತ್ತೆ ಭಕ್ತರ ಸಂಖ್ಯೆ ಹೆಚ್ಚಳವಾಗುತ್ತಿದೆ.
ಗುರುವಾರ ಬರೋಬ್ಬರಿ 90 ಸಾವಿರ ಭಕ್ತರು ಅಯ್ಯಪ್ಪ ಸ್ವಾಮಿಯ ದರುಶನಕ್ಕಾಗಿ ವರ್ಚುವಲ್ ಕ್ಯೂ ಮೂಲಕ ಬುಕ್ ಮಾಡಿದ್ದರು. ಇದಕ್ಕೂ ಮುನ್ನ ಮಂಗಳವಾರ ರಾತ್ರಿ ಸನ್ನಿಧಾನದ 18ನೇ ಮೆಟ್ಟಿಲು ಹತ್ತುವ ಸರತಿ ಸಾಲು ಶಬರಿಪೀಠದವರೆಗೂ ಕಾಣಿಸಿಕೊಂಡಿದ್ದು, ಭಕ್ತರು ಸುಮಾರು 16 ತಾಸುಗಳ ಕಾಲ ಸರತಿ ಸಾಲಿನಲ್ಲಿ ನಿಲ್ಲಬೇಕಾಯಿತು ಎಂದು ಮೂಲಗಳು ತಿಳಿಸಿವೆ.
ವರ್ಚುವಲ್ ಕ್ಯೂ ಮೂಲಕ ಬುಕ್ ಮಾಡದವರೂ ಸನ್ನಿಧಿ ತಲುಪಿದ್ದ ಕಾರಣ ಭಕ್ತ ದಟ್ಟಣೆ ಹೆಚ್ಚಿದೆ ಎಂದು ಹೇಳಲಾಗಿದೆ.