ಹೊಸದಿಗಂತ ವರದಿ ಮಡಿಕೇರಿ:
ಕಾಡಾನೆ ದಾಳಿಗೆ ವ್ಯಕ್ತಿಯೊಬ್ಬರು ಬಲಿಯಾಗಿರುವ ಘಟನೆ ಸೋಮವಾರ ಬೆಳಗ್ಗೆ ತಿತಿಮತಿಯಲ್ಲಿ ನಡೆದಿದೆ.
ತಿತಿಮತಿ ಎಡಪಾರೆ ನಿವಾಸಿ ಮಲ್ಲಂಗಡ ಸನ್ನಿ ಚಂಗಪ್ಪ ಕಾಡಾನೆ ದಾಳಿಗೆ ಬಲಿಯಾದವರು.
ಸೋಮವಾರ ಬೆಳಗ್ಗೆ 8.30ರ ಸುಮಾರಿಗೆ ತಮ್ಮ ಹಸುಗಳನ್ನು ಮೇಯಿಸಲು ಗದ್ದೆಗೆ ಕರೆದೊಯ್ಯುತ್ತಿದ್ದ ಸಂದರ್ಭ ಎದುರಾದ ಕಾಡಾನೆ ಇವರ ಮೇಲೆ ದಾಳಿ ನಡೆಸಿತೆಂದು ಹೇಳಲಾಗಿದೆ. ಸ್ಥಳದಲ್ಲಿ ಅರಣ್ಯ ಇಲಾಖೆಯ ಅಧಿಕಾರಿಗಳು ಹಾಗೂ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದರು.