ಹೊಸದಿಗಂತ ವರದಿ, ಮಡಿಕೇರಿ:
ಕಾಡಾನೆಯೊಂದು ಸಾವನ್ನಪ್ಪಿರುವ ಘಟನೆ ಸಿದ್ದಾಪುರ ಸಮೀಪದ ಬಾಡಗ ಬಾಣಂಗಾಲ ಗ್ರಾಮದಲ್ಲಿ ನಡೆದಿದೆ.
ಅಲ್ಲಿನ ಬಿಬಿಟಿಸಿ ಕಾಫಿ ತೋಟದಲ್ಲಿ ಬುಧವಾರ ಸುಮಾರು 60 ವರ್ಷ ಪ್ರಾಯದ ಹೆಣ್ಣಾನೆಯ ಮೃತದೇಹ ಕಂಡು ಬಂದಿದೆ.
ಇದು ವಯೋಸಹಜ ಸಾವೆಂದು ಅರಣ್ಯ ಇಲಾಖೆ ಅಧಿಕಾರಿಗಳು ಹಾಗೂ ಪಶುವೈದ್ಯಾಧಿಕಾರಿಗಳು ಸ್ಪಷ್ಟಪಡಿಸಿದ್ದಾರೆ.