ASIAN GAMES 2023 | ಭಾರತಕ್ಕೆ ಮತ್ತೊಂದು ಚಿನ್ನ, ಗೆದ್ದು ಬೀಗಿದ ಮಹಿಳಾ ಆರ್ಚರಿ ಟೀಮ್

ಹೊಸದಿಗಂತ ಡಿಜಿಟಲ್ ಡೆಸ್ಕ್:

ಚೀನಾದ ಹ್ಯಾಂಗ್‌ಝೌನಲ್ಲಿ ನಡೆಯುತ್ತಿರುವ ಏಷ್ಯನ್ ಗೇಮ್ಸ್‌ನಲ್ಲಿ ಭಾರತಕ್ಕೆ ಮತ್ತೊಂದು ಚಿನ್ನದ ಪದಕ ದೊರೆತಿದೆ.

ಭಾರತದ ಆರ್ಚರಿ ಮಹಿಳಾ ತಂಡ ತೈವಾನ್ ತಂಡವನ್ನು ಮಣಿಸಿ ಚಿನ್ನಕ್ಕೆ ಮುತ್ತಿಕ್ಕಿದೆ. ವಿಶ್ವ ಚಾಂಪಿಯನ್ ಜ್ಯೋತಿ ಸುರೇಖಾ ವೆನ್ನಂ, ಅದಿತಿ ಸ್ವಾಮಿ ಹಾಗೂ ಪರ್ನೀತ್ ಕೌರ್ ಅತ್ಯುತ್ತಮ ಪ್ರದರ್ಶನ ನೀಡಿದ್ದು, ಭಾರತಕ್ಕೆ ಗೆಲುವು ತಂದುಕೊಟ್ಟಿದ್ದಾರೆ.

ಆರಂಭದಿಂದಲೂ ತೈವಾನ್ ವಿರುದ್ಧ ಮುನ್ನಡೆ ಸಾಧಿಸಿದ್ದ ಟೀಮ್ ಕಡೆಯವರೆಗೂ ಅಗ್ರಸ್ಥಾನ ಕಾಯ್ದುಕೊಳ್ಳುವಲ್ಲಿ ಸಫಲವಾಗಿದೆ. ತೈವಾನ್ ೨೨೯ ಅಂಕ ಗಳಿಸಿದರೆ ಭಾರತ ೨೩೦ ಅಂಕ ಗಳಿಸಿ ಗೆಲುವಿನ ಮೆಟ್ಟಿಲು ಏರಿದೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!