ಹೊಸದಿಗಂತ ಡಿಜಿಟಲ್ ಡೆಸ್ಕ್:
ಆಗಸ್ಟ್ 11ರಿಂದ ಸಾರ್ವಜನಿಕರ ಪ್ರಯಾಣಕ್ಕೆ ಮುಕ್ತವಾಗಿರುವ ಹಳದಿ ಮೆಟ್ರೋ ಮಾರ್ಗದ ಪ್ರಯಾಣಿಕರಿಗೆ ರಾಜ್ಯ ಸರ್ಕಾರ ಮತ್ತೊಂದು ಸಿಹಿ ಸುದ್ದಿಯೊಂದನ್ನು ನೀಡಿದೆ. BMTC ಹಳದಿ ಮೆಟ್ರೋ ನಿಲ್ದಾಣಗಳಿಂದ ಫೀಡರ್ ಬಸ್ ಸರ್ವಿಸ್ ಆರಂಭಿಸಿದೆ.
ಹೌದು..ಮೆಟ್ರೊ ಪ್ರಯಾಣಿಕರ ಅನುಕೂಲಕ್ಕಾಗಿ ಆರ್.ವಿ.ರಸ್ತೆ-ಬೊಮ್ಮಸಂದ್ರ ಮಾರ್ಗದಲ್ಲಿ ಬೆಂಗಳೂರು ಮಹಾನಗರ ಸಾರಿಗೆ ಸಂಸ್ಥೆಯು ಹೊಸದಾಗಿ ಫೀಡರ್ ಬಸ್‌ಗಳ ಕಾರ್ಯಾಚರಣೆಗೆ ಸಾರಿಗೆ ಸಚಿವ ರಾಮಲಿಂಗಾರೆಡ್ಡಿ ಮಂಗಳವಾರ ಚಾಲನೆ ನೀಡಿದ್ದಾರೆ.
ಹೊಸ ರೋಡ್, ಬೆರಟೇನ ಅಗ್ರಹಾರ, ಎಲೆಕ್ಟ್ರಾನಿಕ್ ಸಿಟಿ, ಇನ್ಫೋಸಿಸ್ ಫೌಂಡೇಶನ್, ಕೋನಪ್ಪನ ಅಗ್ರಹಾರ, ಹೆಬ್ಬಗೋಡಿ ಹಾಗೂ ಬೊಮ್ಮಸಂದ್ರ ಸೇಧಿರಿಧಿದಂತೆ ಒಟ್ಟು 6 ಮೆಟ್ರೊ ನಿಲ್ದಾಣಗಳಿಗೆ ಫೀಡರ್ ಸೇವೆಗಳ ಸೌಲಭ್ಯ ಇದೆ. ಪ್ರತಿದಿನ 12 ಬಿಎಂಟಿಸಿ ಬಸ್‌ಗಳು, ಪ್ರತಿದಿನ 96 ಟ್ರಿಪ್ ಮಾಡಲಿವೆ ಎಂದು ಸಾರಿಗೆ ಸಚಿವ ರಾಮಲಿಂಗಾ ರೆಡ್ಡಿ ಮಾಹಿತಿ ನೀಡಿದ್ದಾರೆ.